ಕಲಬುರಗಿ: ಸಮಾಜ ಕಲ್ಶಾಣ ಇಲಾಖೆಯ ಜಂಟಿ ನಿರ್ದೇಶಕ ಸತೀಶಕುಮಾರ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ) ರಾಜ್ಯ ಸಂಘಟನಾ ಸಂಚಾಲಕ ಅರ್ಜುನ್ ಭದ್ರೆ ಆಗ್ರಹಿಸಿದರು.
ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರುˌ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬಹಳಷ್ಟು ಅವ್ಶವಹಾರ ನಡೆಸಲಾಗಿದೆ. ಜಂಟಿ ನಿರ್ದೇಶಕರಾದ ಸತೀಶಕುಮಾರ ಅವರು ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಸರಕಾರಕ್ಕೆ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಯಾದಗಿರಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಕಲಬುರಗಿ ಜಿಲ್ಲಾ ಸಂಚಾಲಕ ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪೂರ, ಶಿವುಕುಮಾರ ಕೊರಳ್ಳಿ, ಮಹೇಶ ಕೋಕಿಲೆ ಉಪಸ್ಥಿತರಿದ್ದರು.