ಸುರಪುರ: ತಾಲ್ಲೂಕಿನಲ್ಲಿ ಎಗ್ಗಿಲ್ಲದೆ ಸಾಗಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ಮುಖಂಡರು ಶುಕ್ರವಾರ ಅಬಕಾರಿ ಸಬ್‌ಇನ್ಸ್‌ಪೆಕ್ಟರ್ ಸೋಮಪ್ಪ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗಪ್ಪ ಹಸನಾಪುರ ಮಾತನಾಡಿ, ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಕಿರಾಣಿ ಅಂಗಡಿ, ಹೊಟೆಲ್, ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ನಿರಂತರವಾಗಿ ನಡೆದಿದೆ. ಅಬಕಾರಿ ಅಧಿಕಾರಿಗಳು ಇದನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಕುಡಿದ ಮತ್ತಿನಲ್ಲಿ ಕಲಹಗಳು ನಡೆಯುವುದರಿಂದ ಗ್ರಾಮಗಳ ಪರಿಸ್ಥಿತಿ ಹದಗೆಟ್ಟುಹೋಗಿದೆ. ಚಿಕ್ಕಮಕ್ಕಳು ಕುಡಿತದ ಚಟಕ್ಕೆ ಬಲಿಯಾಗಿ ತಮ್ಮ ಭವಿಷ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಎಷ್ಟೊ ಕುಟುಂಬಗಳು ಬೀದಿಗೆ ಬಿದ್ದಿವೆ. ಗ್ರಾಮದ ನೆಮ್ಮದಿ ಹಾಳಾಗಿ ಹೋಗಿದೆ ಎಂದು ದೂರಿದರು.
ತಾಲ್ಲೂಕು ಸಮಿತಿ ಸಂಚಾಲಕ ವೀರಭದ್ರಪ್ಪ ತಳವಾರಗೇರಿ ಮಾತನಾಡಿ, ಮದ್ಯ ಮಾರಾಟ ಗ್ರಾಮದಿಂದ ದೂರದಲ್ಲಿರಬೇಕು. ಯಾವುದೇ ಧಾರ್ಮಿಕ ಸ್ಥಳ, ಶಾಲೆಯ ಹತ್ತಿರ ಇರಬಾರದು. ಪರವಾನಗಿ ಹೊಂದಿರುವವರು ಮಾತ್ರ ಮಾರಾಟ ಮಾಡಬೇಕು ಎಂಬ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಅಬಕಾರಿ ಇಲಾಖೆ ಶೀಘ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ತೀವ್ರ ನಿಗಾ ವಹಿಸಬೇಕು. ನಿರ್ಲಕ್ಷ್ಯ ಧೋರಣೆ ತಾಳಿದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಅಂಬ್ರೇಶ ದೊಡ್ಡಮನಿ, ಶೇಖರ ಬಡಿಗೇರ ಮಂಗಳೂರ, ಗೌತಮ ಬಡಿಗೇರ, ಆಕಾಶ ಕಟ್ಟಿಮನಿ, ವೆಂಕಟೇಶ ದೇವಪುರ, ಖಾಜಾ ಅಜ್ಮೀರ್, ಅಂಬೇಡ್ಕರ್ ದೊಡ್ಡಮನಿ, ಎಂ. ಪಟೇಲ, ರಮೇಶ ಬಡಿಗೇರ, ಅಶೋಕ ಕೋರಿ, ರವಿಕುಮಾರ ದೊಡ್ಡಮನಿ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…