ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಪ್ರಕರಣ ಸಾಕಷ್ಟು ವಿವಾದಕ್ಕೆ ಕಾರಣ ಕಾರಣವಾಗಿದ್ದು ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್ ನಾಳೆಯೇ ಪ್ರಕಟ ಮಾಡಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಇದೇ 17ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನಿವೃತ್ತಿಯಾಗಲಿದ್ದಾರೆ. ಏತನ್ಮಧ್ಯೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು, ಐತಿಹಾಸಿಕ ತೀರ್ಪು ಬರೆಯುವುದಕ್ಕೋಸ್ಕರ ತಮ್ಮ ವಿದೇಶ ಪ್ರವಾಸ ಮೊಟಕುಗೊಳಿಸಿದ್ದು, ಅಲ್ಲದೆ ಅಯೋಧ್ಯೆ ತೀರ್ಪು ಅಂತಿಮವಾಗುವವರೆಗೂ ತಾವೆಲ್ಲೂ ಹೋಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ಎನ್ನಲಾಗಿದೆ.
ಆದರೆ, ಅಚ್ಚರಿ ಎಂಬಂತೆ ನಾಳೆ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದೆ ಎನ್ನಲಾಗಿದೆ.
ಅಯೋಧ್ಯೆ ತೀರ್ಪು ಪ್ರಕಟವಾದರೆ ಕೋಮು ಗಲಭೆ ಮತ್ತು ಅಹಿತಕರ ಘಟನೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ತೀರ್ಪು ಪ್ರಕಟವಾದಾಗ ಪೊಲೀಸರ ಕೊರತೆ ಉಂಟಾಗಬಾರದು ಎಂಬ ಕಾರಣಕ್ಕೆ ಪೊಲೀಸರ ವಾರದ ರಜೆಯನ್ನು ಕಡಿತಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.