ಬೆಂಗಳೂರು: ಇಡೀ ದೇಶವೇ ಅಯೋಧ್ಯೆ ತೀರ್ಪಿಗೆ ಕಾದು ಕೂತಿದೆ. ನಾಳೆ ಅಯೋಧ್ಯೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರ್ನಾಟಕದಲ್ಲಿಯೂ ಸಹ, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆಯನ್ನು ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿದ್ದು, ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕಲಬುರಗಿ: ಅಯೋಧ್ಯಾ ತೀರ್ಪು ಹಿನ್ನಲೆ, ಕಲಬುರಗಿ ಜಿಲ್ಲೆಯಾದ್ಯಂತ ಭಾನುವಾರ ಬೆಳಗ್ಗೆ 8 ರವರೆಗೆ ಸೆಕ್ಸೆನ್ 144 ಜಾರಿಗೊಳಿಸಲಾಗಿದ್ದು, ಮದ್ಯ ನಿಷೇಧ ಮಾಡಿ ಕಲಬುರಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಗರದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ. ಭದ್ರತೆಗಾಗಿ ನಗರದಲ್ಲಿ ನಾಲ್ಕು ಸಾವಿರ ಪೊಲೀಸರ ನಿಯೋಜನೆ. 4 ಕೆ ಎಸ್ ಆರ್ ಪಿ ತುಕಡಿ ಸಿ ಎ ಆರ್ , ಡಿ ಎ ಆರ್ ಮತ್ತು ಸಿವಿಲ್ ಪೊಲೀಸರು ಸೇರಿ ನಾಲ್ಕು ಸಾವಿರ ನಿಯೋಜನೆ.
ಸಾಮಾಜಿಕ ಜಾಲತಾಣಗಳಲ್ಲಿ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡದಂತೆ ಮತ್ತು ಪ್ರಚೋದನಕಾರಿ ಸ್ಟೆಟಸ್ ಹಾಕಿದ್ದವರ ವಿರುದ್ದ ಕಠಿಣ ಕ್ರಮ ಹಾಗೂ ಗಡಿಪಾರು ಮಾಡುವದಾಗಿ ಪೊಲೀಸ್ ಕಮೀಷನರ್ ಎಂ.ಎನ್.ನಾಗರಾಜ್ ಖಡಕ್ ಸೂಚನೆ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…