ಕಲಬುರಗಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಂಬಂಧವಾಗಿ ಸರ್ವೋಚ್ಚ ನ್ಯಾಯಾಲಯವು ನೀಡಿರುವ ತೀರ್ಪು ದೇಶದ 130 ಕೋಟಿ ಜನ ಒಪ್ಪುವ ತೀರ್ಪಾಗಿದೆ ಎಂದು ಡಿಸಿಎಂ ಆಗಿರುವ ಲೋಕೋಪಯೋಗಿ ಇಲಾಖೆ, ಸಮಾಉ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಐತಿಹಾಸಿಕ ತೀರ್ಪು. ನಾವು ಇದನ್ನು ಸ್ವಾಗತಿಸುತ್ತೇವೆ. ಐಕ್ಯತೆ ಮತ್ತು ಸಹಾನುಭೂತಿ ಜತೆಗೆ ಅಖಂಡತೆ ಉಳಿಸಿಕೊಂಡು ಹೋಗಬೇಕು ಎಂದರು.
ತೀರ್ಪಿನ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಯ ಕಡೆಗೆ ಹೆಚ್ಚಿನ ಲಕ್ಷ್ಯ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.