ಕಲಬುರಗಿ: ಇಂದು ನಗರದ ಹಫತ್ ಗುಂಬಜ್ ಹತ್ತಿರ ಈದ್ ಮಿಲದ್ ಪ್ರಯುಕ್ತ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ಸ್ತಬ್ದ ಚಿತ್ರಗಳ ಭವ್ಯ ಮೆರವಣಿಗೆ ನಡೆಯಿತ್ತು. ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಪರಸ್ಪರ ಶುಭ ಕೋರಿ ಇತರ ಧರ್ಮಿಯರು ಭಾಗವಹಿಸಿ ಸೌಹಾರ್ದತೆಗೆ ಸಾಕ್ಷಿಯಾದರು.
ನ್ಯಾಷನಲ್ ಕಾಲೇಜಿಯಿಂದ ಪ್ರಾರಂಭವಾದ ಮೆರವಣಿಗೆ ಗಂಜ್ ಹಾಗೂ ನಗರದ ಸುಪರ್ ಮಾರ್ಕೆಟ್ ಮಾರ್ಗವಾಗಿ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾರೋಪಗೊಂಡಿತು.
ಸುಪರ್ ಮಾರ್ಕೆಟ್ ಹತ್ತಿರ ಗಣೇಶ ಮಂದರದಲ್ಲಿ ಅಪಾರ ಮುಸ್ಲಿಂ ಮಹಿಳೆಯರು ಮಂದಿರದ ಮೆಟ್ಟಿಲು ಮೇಲೆ ಕುಳಿತುಕೊಂಡು ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ನಿರ್ಮಿಸಿರುವ ಸ್ತಬ್ದ ಚಿತ್ರಗಳ ಮೆರವಣಿ ವಿಕ್ಷಿಸುವುದು ವಿಶೇಷವಾಗಿತ್ತು.
ಅಲ್ಲದೇ ಸಂಗತ್ರಾಶವಾಡಿ ಬಡಾವಣೆವನ್ನು ಅಲಾಂಗರಗೋಳಿರುವುದನ್ನು ಮುಸ್ಲಿಂ ಸೇರಿದಂತೆ ಇತರೆ ಸಮುದಾಯದವರು ವಿಕ್ಷಿಸುವ ಮೂಲಕ ಈದ್ ಮಿಲಾದ್ ಹಬ್ಬವನ್ನು ಸಡಗರದಿಂದ ಆಚರಿಸಿದ್ದರು.
ಇದೇ ಸಂದರ್ಭದಲ್ಲಿ ಕಾರ್ಯಾನಿರತ ಪೊಲೀಸರೊಂದಿಗೆ ಮುಸ್ಲಿಂ ಬಾಂಧವರು ಸೇಲ್ಫಿ ತೆಗೆದುಕೊಂಡ ಪರಸ್ಪರ ಸಂತೋಷ ಹಂಚಿದ್ದು, ಹಬ್ಬಕ್ಕೆ ಸಹಕರಿಸಿದ ಮಹಾನಗರ ಪಾಲಿಕಯ ಸಿಬ್ಬಂದಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಸಮುದಾಯದ ಮುಖಂಡರು ಅಭಿನಂದನೆ ಸಲ್ಲಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…