ಬಿಸಿ ಬಿಸಿ ಸುದ್ದಿ

ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ: ಆರ್.ವೆಂಕಟೇಶ್ ಕುಮಾರ

ಕಲಬುರಗಿ: ಮೇ 19ಕ್ಕೆ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದೆ. ಹೀಗಾಗಿ ವಿವಿಧ ಕಾರ್ಯಗಳಿಗೆ ಲೋಕಸಭಾ ಚುನಾವಣೆಗೆ ನೇಮಿಸಲಾದ ನೋಡಲ್ ಅಧಿಕಾರಿಗಳೆ ಇಲ್ಲಿಯೂ ನೋಡಲ್ ಅಧಿಕಾರಿಗಳಾಗಿ ಮುಂದುವರೆಯಲಿದ್ದಾರೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದರು.

ಅವರು ಶುಕ್ರವಾರ ಇಲ್ಲಿನ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ರಾಜಕೀಯವಾಗಿ ಮಹತ್ವ ಪಡೆದುಕೊಂಡಿರುವ ಈ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಯನ್ವಯ ಎಲ್ಲಾ ನೋಡಲ್ ಅಧಿಕಾರಿಗಳು ತುಂಬಾ ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಚುನಾವಣಾ ಕಾರ್ಯದಲ್ಲಿ ಯಾವುದೇ ಲೋಪಕ್ಕೆ ಅವಕಾಶ ಮಾಡಕೂಡದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೇ 23ಕ್ಕೆ ಗುಲಬರ್ಗಾ ಲೋಕಸಭಾ ಕ್ಷೇತ್ರ ಚುನಾವಣೆಯ ಮತ ಎಣಿಕೆ ಕಾರ್ಯವು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಅಂದೆ ಇಲ್ಲಿಯೆ ಚಿಂಚೋಳಿ ಉಪ ಚುನಾವಣೆಯ ಮತ ಎಣಿಕೆಯೂ ನಡೆಯಲಿದೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರದಾದ್ಯಂತ ಕಟ್ಟಿನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಗೆ ತರಲು 12 ಫ್ಲೈಯಿಂಗ್ ಸ್ಕ್ವಾಡ್ ರಚನೆ, 10 ಚೆಕ್ ಪೋಸ್ಟ್ ಸ್ಥಾಪಿಸಲಾಗುವುದು. ಅಕ್ರಮ ತಡೆಯಲು ಎಸ್.ಎಸ್.ಟಿ. ತಂಡಗಳು, ಉಡುಗೊರೆ ಹಾಗೂ ಇನ್ನೀರ ವಸ್ತುಗಳ ಅಕ್ರಮ ಸಾಗಾಣಿಕೆ ಪತ್ತೆಗೆ ವಾಣಿಜ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡ, ಅಕ್ರಮ ಹಣದ ನಿಗಾ ಇಡಲು ಆದಾಯ ತೆರಿಗೆ ಅಧಿಕಾರಿಗಳ ತಂಡ, ವಿ.ಎಸ್.ಟಿ., ವಿವಿಟಿ ತಂಡಗಳು ಕಾರ್ಯನಿರ್ವಹಿಸಲಿವೆ. ಚಿಂಚೋಳಿಗೆ ಇತರೆ ತಾಲೂಕುಗಳಿಂದ ಸಂಪರ್ಕ ಸಾಧಿಸುವ ಗಡಿ ಹಾಗೂ ಪಕ್ಕದ ಆಂಧ್ರ ಗಡಿಯಲ್ಲಿಯೂ ಚೆಕ್ ಪೋಸ್ಟ್, ಅಬಕಾರಿ ಚೆಕ್ ಪೋಸ್ಟ್ ಸ್ಥಾಪಿಸುವಂತೆ ಆ ರಾಜ್ಯದ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕು ಎಂದರು.

ದೂರಿಗೆ ಶುಲ್ಕರಹಿತ ಸಹಾಯವಾಣಿ: ಚುನಾವಣೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು 24X7 ತಾಸು ಶುಲ್ಕರಹಿತ 1950 ಸಹಾಯವಾಣಿ ಆರಂಭಿಸಬೇಕು. ಇದರ ಜೊತೆಯಲ್ಲಿ ಸಿ-ವಿಜಿಲ್ ಮತ್ತು ದೂರು ಮೇಲ್ವಿಚಾರಣಾ ಸೆಲ್ ಸಹ ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು.

ಚಿಂಚೋಳಿಯಲ್ಲಿ ಪರವಾನಿಗೆ ಪಡೆಯಿರಿ: ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಸಂಘ ಸಂಸ್ಥೆಗಳು ಚುನಾವಣಾ ಪ್ರಚಾರಕ್ಕೆಂದು ನಡೆಸುವ ಸಭೆ, ಸಮಾರಂಭ ಹಾಗೂ ವಾಹನಗಳ ಓಡಾಟಗಳಿಗೆ ಪರವಾನಿಗೆಯನ್ನು ಚಿಂಚೊಳಿ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಸಿಂಗಲ್ ವಿಂಡೋ ಸಿಸ್ಟಂ ಮೂಲಕ ಪಡೆಯಬೇಕು. ವಿಮಾನ ಮತ್ತು ಹೆಲಿಕಾಫ್ಟರ್ ಇಳಿಯಲು ಹಾಗೂ ನಿಲ್ಲಲು ಜಿಲ್ಲಾ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬೇಕಾಗುತ್ತದೆ. ಇದಲ್ಲದೆ ವಿವಿಧ ಪರವಾನಿಗೆಗಳಿಗೆ ಸುವಿಧಾ ಮೂಲಕ ಆನ್‌ಲೈನ್‌ನಲ್ಲಿಯೆ ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚಿಂಚೋಳಿ ತಾಲೂಕಿನ ಸುಲ್ತಾನ ಗ್ರಾಮದ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿರುವ ಹಿನ್ನೆಲೆಯಲ್ಲಿ ಕೂಡಲೆ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಮತದಾನ ಮಾಡುವಂತೆ ಅವರ ಮನವೊಲಿಸಬೇಕು. ಯಾರಾದರು ಒತ್ತಾಯಪೂರ್ವಕ ಗ್ರಾಮಸ್ಥರಿಗೆ ಮತದಾನ ಮಾಡದಂತೆ ತಡೆ ಒಡ್ಡಿದರೆ ಅಂತಹವರ ಮೇಲೆ ಕಠಿನ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ:

ಅನಧಿಕೃತವಾಗಿ ಲೋಗೋ ಹಿಡಿದುಕೊಂಡು ಪತ್ರಕರ್ತರಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಸುದ್ದಿ, ಆನ್‌ಲೈನ್ ಸರ್ವೆ ಪ್ರಸಾರ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಅಂತಹವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಇನ್ನು ಕಾಸಿಗಾಗಿ ಸುದ್ದಿ ಸೇರಿದಂತೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಎಂ.ಸಿ.ಎಂ.ಸಿ ತಂಡ ನೇಮಿಸಲಾಗಿದೆ. ಇದಲ್ಲದೆ ಟಿ.ವಿ., ಸ್ಥಳೀಯ ಕೇಬಲ್, ರೇಡಿಯೋಗಳಲ್ಲಿ, ಎಲ್.ಇ.ಡಿ. ಸ್ಕ್ರೀನ್ ವಾಹನಗಳ ಮೇಲೆ ದೃಶ್ಯ ಮತ್ತು ಆಡಿಯೋ ಜಾಹೀರಾತು ಪ್ರಸಾರಕ್ಕೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಸಂಘ-ಸಂಸ್ಥೆಗಳು ಜಾಹೀರಾತು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ ಫ್ಲೈಯಿಂಗ್ ಸ್ಕ್ವಾಡ್, ಎಸ್.ಎಸ್.ಟಿ. ತಂಡಗಳು ತುಂಬಾ ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಚೆಕ್ ಪೋಸ್ಟ್‌ಗಳಲ್ಲಿ ಜನಪ್ರತಿನಿಧಿಗಳು ಸೇರಿದಂತೆ, ಯಾವುದೇ ರಾಜಕೀಯ ಗಣ್ಯರು ಮಾರ್ಗದಲ್ಲಿ ಸಂಚರಿಸಿದಾಗ ಪ್ರತಿ ಬಾರಿ ವಾಹನವನ್ನು ಕಡ್ಡಾಯವಾಗಿ ಪರೀಕ್ಷಿಸಬೇಕು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಚಿಂಚೋಳಿ ಚುನಾವಣಾಧಿಕಾರಿ ಸೋಮಶೇಖರ್ ಎಸ್.ಜಿ., ಚಿಂಚೋಳಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಕ್ಷಯ ಸೇರಿದಂತೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago