ಬಿಸಿ ಬಿಸಿ ಸುದ್ದಿ

ರಾಷ್ಟ್ರೀಯ ಶಿಕ್ಷಣ ದಿನಾಚರಣೆ: ಶಿಕ್ಷಣ ಸಾಮಾಜಿಕ ಪರಿವರ್ತನೆಯ ಸಾಧನ: ಪ್ರೊ.ಎಚ್.ಬಿ.ಪಾಟೀಲ

ಕಲಬುರಗಿ: ಶಿಕ್ಷಣವು ಮಾನವನಲ್ಲಿ ಅಡಗಿರುವ ಅಜ್ಞಾನವನ್ನು ದೂರಮಾಡಿ, ಅವನಿಗೆ ಅಮೂಲ್ಯವಾದ ಜ್ಞಾನವನ್ನು ನೀಡಿ ರಾಷ್ಟ್ರದ ಸದೃಢ ಮಾನವ ಸಂಪನ್ಮೂಲ ನಿರ್ಮಾಣ ಮಾಡುವ ಮೂಲಕ ಸಾಮಾಜಿಕ ಪರಿವರ್ತನೆಯ ಪ್ರಮುಖ ಸಾಧನವಾಗಿದೆ. ಶಿಕ್ಷಣವು ಕೇವಲ ಪರಿಮಾಣಾತ್ಮಕವಾಗಿರದೇ, ಗುಣಮಟ್ಟದಿಂದ ಕೂಡಿದರೆ ಮಾತ್ರ ರಾಷ್ಟ್ರ ಅಭಿವೃದ್ಧಿ ಸಾಧ್ಯವಿದೆಯೆಂದು ಉಪನ್ಯಾಸಕ, ಚಿಂತಕ ಪ್ರೊ.ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.

ಅವರು ನಗರದ ’ಎಂ.ಎಂ.ಎನ್ ಟ್ಯೂಟೋರಿಯಲ್ಸ್’ನಲ್ಲಿ, ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಡಾ.ಮೌಲಾನಾ ಅಬ್ದುಲ್ ಕಲಾಂ ಆಜಾದ ಅವರ ಜನ್ಮ ದಿನವಾದ ’ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ಯಲ್ಲಿ ಅವರಿಗೆ ನಮನಗಳನ್ನು ಸಲ್ಲಿಸಿ ಮಾತನಾಡುತ್ತಿದ್ದರು. ಗುಣಮಟ್ಟದ ಶಿಕ್ಷಣದಿಂದ ಮಾನವ ಸಂಅಪನ್ಮೂಲ ಅಭಿವೃದ್ಧಿಯಾಗಲು ಸಾಧ್ಯವಿದೆ. ಶ್ರಮಬಲದ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ. ಜನರಿಗೆ ಬದುಕುವ ವಿಧಾನವನ್ನು ಕಲಿಸಿಕೊಡುತ್ತದೆ. ಇದರಿಂದ ಜನರು ಅಭಿವೃದ್ಧಿಯ ಚಟುವಟಿಕೆಗಳಲ್ಲಿ ನೇರವಾಗಿ ಭಾಗವಹಿಸುತ್ತಾರೆ. ಸಂಶೋಧನೆ ಮತ್ತು ಆವಿಷ್ಕಾರಗಳು ಹೆಚ್ಚಾಗಿ ಜರುಗಿ, ರಾಷ್ಟ್ರದ ಸರ್ವಾಂಗೀಣ ಪ್ರಗತಿಯಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯಬೇಕು. ಇದರಿಂದ ರಾಷ್ಟ್ರಕ್ಕೆ ಉಜ್ವಲ ಭವಿಷ್ಯವಿದೆ ಎಂದರು.

ನಮ್ಮ ದೇಶ ಸ್ವಾತಂತ್ರ್ಯ ಪಡೆದಾಗ ಸಾಕ್ಷರತಾ ಪ್ರಮಾಣ ಶೇ.೧೪ರಷ್ಟು ಇದ್ದದ್ದು, ಇಂದು ಶೇ.೭೪ಕ್ಕೆ ತಲುಪಿದೆ.ಇದಕ್ಕೆ ಸರ್ಕಾರ ಸಾಕಷ್ಟು ಹಣ ವ್ಯಯ ಮಾಡಿ, ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವೆಲ್ಲಾ ಯೋಜನೆಗಳ ಸದುಪಯೋಗವನ್ನು ಪಡಿಸಿಕೊಳ್ಳಬೇಕು. ಶಿಕ್ಷಣದ ಮಹತ್ವದ ಬಗ್ಗೆ ಜನಜಾಗೃತಿಯನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜರುಗಬೇಕಾಗಿದೆ ಎಂದು ಹೇಳಿದರು. ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಹ ಶಿಕ್ಷಕ ವೀರೇಶ ಬೋಳಶೆಟ್ಟಿ ನರೋಣಾ ಮಾತನಾಡಿ, ಶಿಕ್ಷಣದ ಬೆಳವಣಿಗೆಗೆ ಡಾ.ಮೌಲಾನಾ ಅಬ್ದುಲ್ ಕಲಾಂ ಆಜಾದ ಅವರ ಕೊಡುಗೆ ತುಂಬಾ ಅನನ್ಯವಾಗಿದೆ.ವಿದ್ಯಾರ್ಥಿ ದೆಶೆಯಿಂದಲೇ ಇಂತಹ ಮಹನೀಯರ ಬಗ್ಗೆ ತಿಳಿದುಕೊಳ್ಳಬೇಕು. ಇವರು ದೇಶದ ಸ್ವಾತಂತ್ರ್ಯ ಹಾಗೂ ಪ್ರಥಮ ಶಿಕ್ಷಣ ಮಂತ್ರಿಗಳಾಗಿ ಶಿಕ್ಷಣ ಕ್ಷೇತ್ರಕ್ಕೆ ಅಮೋಘವಾದ ಕೊಡುಗೆಯನ್ನು ನೀಡಿದ್ದಾರೆಂದು ನುಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಮರ ಬಂಗರಗಿ, ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ, ಸದಸ್ಯರಾದ ಬಸವರಾಜ ಪುರಾಣೆ, ಮಲ್ಲಿನಾಥ ಮುನ್ನಳ್ಳಿ, ರವೀಂದ್ರ ಗುತ್ತೇದಾರ,ಸದಾಶಿವಾ ಶಿರಗುಂಪಿ, ಕೇತನ ಚೌಲ್, ವಿನೋದ ಕಲಶೆಟ್ಟಿ, ಶಿವಲಿಂಗ ನಾಗಶೆಟ್ಟಿ ಸೇರಿದಂತೆ ಸಂಸ್ಥೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago