ಕಲಬುರಗಿ : ಪರಮಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜೀಯವರ 85ನೇ ಜನ್ಮ ದಿನದ ಪ್ರಯುಕ್ತ ಶರಣಬಸವ ವಿಶ್ವವಿದ್ಯಾಲಯ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಪದವಿ ಮಹಾವಿದ್ಯಾಲಯಗಳು ಮತ್ತು ಬಿ.ಎಡ್ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಇದೇ ನವೆಂಬರ್ 14 ರಂದು ಬೆಳಗ್ಗೆ 9 ಗಂಟೆಗೆ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾವರು ರಚಿಸಿರುವ ಮಹಾದಾಸೋಹ ಸೂತ್ರಗಳ ಮೇಲೆ ಒಂದು ದಿನದ ರಾಷ್ಟ್ರ ಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ.
ಸಮ್ಮೇಳನವನ್ನು ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಅಧ್ಯಕ್ಷರು, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪರಮಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಹೆಚ್.ಎಮ್.ಮಹೇಶ್ವರಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಲಕ್ನೋ ಕೇಂದ್ರೀಯ ವಿಶ್ವವಿದ್ಯಾಲಯದ ಆಂಗ್ಲ ವಿಭಾಗ ಮತ್ತು ವಿದೇಶಿ ಭಾಷೆಯ ಮುಖ್ಯಸ್ಥ ಡಾ.ಮನೀಷ್‍ಕುಮಾರ ಗೌರವ, ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ ಗೌರವ ಅತಿಥಿಗಳಾಗಿ ಮತ್ತು ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ್ ನಿಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಮ್ಮೇಳನದಲ್ಲಿ ಹೈದ್ರಾಬಾದಿನ ಡಾ.ಬಿ.ಆರ್.ಅಂಬೇಡ್ಕರ ಮುಕ್ತ ವಿಶ್ವವಿದ್ಯಾಲಯದ ಆಂಗ್ಲ ವಿಭಾಗ ಮತ್ತು ವಿದೇಶಿ ಭಾಷೆಯ ಮುಖ್ಯಸ್ಥ ಡಾ.ಕಿಶೋರಕುಮಾರ ರೆಡ್ಡಿ, ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರೊ. ವಿಜಯಾದೇವಿ ಮತ್ತು ಚೆನೈನ ಮದ್ರಾಸ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ತಮಿಳ್ ಸೆಲ್ವಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ 3 ಗಂಟೆಗೆ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜೀಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶರಣಬಸವ ವಿಶ್ವವಿದ್ಯಾಲಯದ ಸಮ ಕುಲಪತಿಗಳಾದ ಡಾ.ವಿ.ಡಿ.ಮೈತ್ರಿ ಮುಖ್ಯ ಅತಿಥಿಗಳಾಗಿ, ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನೀಲಕುಮಾರ ಬಿಡವೆ ಮತ್ತು ಕುಲಸಚಿವ ಮೌಲ್ಯಮಾಪನ ಡಾ.ಲಿಂಗರಾಜ ಶಾಸ್ತ್ರೀ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ ಅಧ್ಯಕ್ಷತೆ ವಹಿಸಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…