ರಾಯಚೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಸಾವಿನ ಕೃತ್ಯಗಳಿಗೆ ಕಡಿವಾಣ ಹಾಕುವ ಕುರಿತು ರಾಯಚೂರು ಎಡಿಜಿಪಿ ಅವರು ಸಾರ್ವಜನಿಕರೊಂದಿಗೆ ಸಭೆ ನಡೆಸಿ ಅಭಿಪ್ರಯ ಸಂಗ್ರಹಿಸಿದ್ದರು.
ನಗರದ SP ಕಛೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ IG, SP ಸೇರಿ ಜಿಲ್ಲೆಯ ಎಲ್ಲಾ ಉನ್ನತ ಮಟ್ಟದ ಪೋಲಿಸ್ ಅಧಿಕಾರಿಗಳ ಸಮ್ಮೂಖದಲ್ಲಿ ನಡೆಸಿದರು. ದೇಶದಲ್ಲಿ ಮಹಿಳೆಯರ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲೆಂದು ನೇಮಿಸಲಾಗಿದ್ದ ನ್ಯಾಯಮೂರ್ತಿ ವರ್ಮಾ ಸಮಿತಿಯ ಶಿಫಾರಸ್ಸು ಗಳನ್ನು ದೇಶವ್ಯಾಪಿ ಜಾರಿ ಮಾಡಿ ಅದರ ಬಗ್ಗೆ ಜಾಗೃತಿ ಮೂಡಿಸಬೇಕು. ಮಹಿಳೆಯರ ದೌರ್ಜನ್ಯ ತಡೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮಾನ್ಯ ಉಗ್ರಪ್ಪ ನವರು ನೀಡಿದ ವರದಿಯ ಶಿಫಾರಸುಗಳನ್ನು ರಾಜ್ಯವಾಪಿ ಜಾರಿ ಮಾಡಬೇಕು.
ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಾನ್ಯ ಜಿಲ್ಲಾಧಿಕಾರಿ ಗಳು ಮತ್ತು SP ಯವರನ್ನು ಒಳಗೊಂಡಂತೆ ಲೈಗಿಂಕ ಕಿರುಕುಳ ವಿರೋಧ ಸಮಿತಿ ರಚನೆ ಮಾಡಿ ಕ್ರಿಯಾಶೀಲಗೊಳಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ದೂರು ಮತ್ತು ಸಲಹಾ ಪೆಟ್ಟಿಗೆ ಗಳನ್ನು ಪೋಲಿಸ್ ಇಲಾಖೆಯಿಂದ ಇಡಬೇಕು. ಮಧು ಸಾವಿನ ಪ್ರಕರಣ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ಯಾಗಿ ಈ ಸಾವಿಗೆ ನ್ಯಾಯ ಒದಗಿಸಬೇಕು. ಹಾಗೂ ಈ ಪ್ರಕರಣದ ತೀರ್ಪು ಇಡೀ ದೇಶಕ್ಕೆ ಮಾದರಿಯಾಗಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು. SFI ಜಿಲ್ಲಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಪ್ರಮುಖ ವಾಗಿ ಮಾತನಾಡಿ ಅಧಿಕಾರಿಗಳ ಗಮನ ಸೆಳೆದರು ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳು ಅಧಿಕಾರಿಗಳ ಡೈರಿಯಲ್ಲಿ ದಾಖಲಾಗುವಂತೆ ಮಾತನಾಡಿ ಪ್ರಶಂಸೆ ಗೆ ಗೆಟ್ಟಿಸಿಕೊಂಡರು.
ಸಭೆಯಲ್ಲಿ ವಿವಿಧ ಸಂಘಟನೆಯ ಮುಖಂಡರು, ಸಮುದಾಯದ ಗಣ್ಯರು, ವಿದ್ಯಾರ್ಥಿಪರ ಸಂಘಟನೆಯಗಳು ಸಭೆಯಲ್ಲಿ ಭಾಗವಹಿಸಿದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…