ಬಿಸಿ ಬಿಸಿ ಸುದ್ದಿ

ಉದ್ದಿಮೆ ಸ್ಥಾಪನೆ ಮಾಡದಿದ್ದಲ್ಲಿ ನಿವೇಶನ ಹಂಚಿಕೆಯನ್ನು ರದ್ದುಗೊಳಿಸಿ: ಶರತ್.ಬಿ

ಕಲಬುರಗಿ: ಕಲಬುರಗಿ ಜಿಲ್ಲೆಯ ನಂದೂರ-ಕೆಸರಟಗಿ ಸೇರಿದಂತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ೨೦೦೭-೦೮ರಲ್ಲಿ ಉದ್ದಿಮೆ ಸ್ಥಾಪನೆಗೆ ನಿವೇಶನ ಪಡೆದು ದಶಕಗಳು ಕಳೆದಿವೆ. ಇದೂವರೆಗೆ ಕೆಲ ಕೈಗಾರಿಕೋದ್ಯಮಿಗಳು ಉದ್ದಿಮೆ ಸ್ಥಾಪನೆ ಮಾಡದಿರುವುದರಿಂದ ಇಂತಹ ಹಂಚಿಕೆ ಮಾಡಲಾದ ನಿವೇಶನವನ್ನು ನಿಯಮಾನುಸಾರ ರದ್ದತಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶರತ್.ಬಿ. ಅವರು ಕೆಐಎಡಿಬಿ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿ ಸಭೆ ನಡೆಸಿದ ಅವರು, ನಿವೇಶನ ಪಡೆದ ಕೈಗಾರಿಕೋದ್ಯಮಿಗಳು ಘಟಕ ಸ್ಥಾಪಿಸಿ ಉದ್ಯೋಗ ನೀಡುವಂತಾಗಬೇಕು. ಆದರೆ ಹಲವು ನಿವೇಶನಗಳು ಇಲ್ಲಿ ಖಾಲಿ ಉಳಿದಿದ್ದು ನಮ್ಮ ಗಮನಕ್ಕೆ ಬಂದಿದ್ದು ತೀವ್ರ ಬೇಸರದ ಸಂಗತಿ ಎಂದ ಅವರು ಇಂತಹ ನಿವೇಶನಗಳು ರದ್ದುಗೊಳಿಸಿ ಅರ್ಹರಿಗೆ ಮರು ಹಂಚಿಕೆ ಮಾಡುವಂತೆ ತಿಳಿಸಿದರು.

ಇಂದಿನ ದಿನಮಾನದಲ್ಲಿ ಕೈಗಾರಿಕೆ ನಡೆಸುವುದು ತುಂಬಾ ಕಷ್ಟದ ಕೆಲಸವಾಗಿದೆ. ಹೀಗಾಗಿ ಕೈಗಾರಿಕೆ ಸ್ಥಾಪಿಸಿ ನಿರುದ್ಯೋಗಿಗಳಿಗೆ ಕೆಲಸ ನೀಡಲು ಮುಂದೆ ಬರುವ ಉದ್ಯಮಿಗಳಿಗೆ ಅನಗತ್ಯ ತೊಂದರೆ ನೀಡದೆ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಅಗತ್ಯವಿದೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಕೆ.ಐ.ಎ.ಡಿ.ಬಿ., ಕೆ.ಎಸ್.ಎಸ್.ಐ.ಡಿ.ಸಿ. ಅಧಿಕಾರಿಗಳು ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಉದ್ಯಮಿದಾರರಿಗೆ ಸೂಕ್ತ ಸಹಕಾರ ನೀಡಬೇಕು ಎಂದರು.

ಕಲಬುರಗಿ ನಗರದ ಎಂ.ಎಸ್.ಕೆ.ಮಿಲ್ ರಸ್ತೆಯ ೧೭ ಎಕರೆ ಪ್ರದೇಶದಲ್ಲಿ ವಿಸ್ತೀರ್ಣಗೊಂಡಿರುವ ಕೈಗಾರಿಕಾ ವಸಾಹತು ಪ್ರದೇಶ ತುಂಬಾ ಹಳೆಯದಾಗಿದ್ದು, ಸುತ್ತಮುತ್ತಲಿನ ರಸ್ತೆ ನಿರ್ಮಾಣದಿಂದ ಈ ಪ್ರದೇಶ ರಸ್ತೆಯಿಂದ ೩-೪ ಅಡಿ ಕೆಳಗಿದೆ. ಹೀಗಾಗಿ ಇಲ್ಲಿ ಮಳೆ ಮತ್ತು ಚರಂಡಿ ನೀರು ಸರಾಗವಾಗಿ ಸಾಗುತ್ತಿಲ್ಲ. ಇದರಿಂದ ರಸ್ತೆ ಹಾಳಾಗಿದೆ. ಪ್ರದೇಶದಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ಇಲ್ಲದಿರುವುದರಿಂದ ಕಾರ್ಮಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಸಭೆಯಲ್ಲಿದ್ದ ಉದ್ಯಮಿಗಳು ಡಿ.ಸಿ. ಅವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೂಡಲೆ ಸ್ಥಳಕ್ಕೆ ಬೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆಯವರಿಗೆ ನಿರ್ದೇಶನ ನೀಡಿದರು.

ಪ್ರತಿ ತಿಂಗಳು ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ನಡೆಸುವ ಮೂಲಕ ಕೈಗಾರಿಕ್ಯೋದ್ಯಮಿಗಳ ಸಮಸ್ಯೆಗಳನ್ನು ಪರಿಹರಿಸಲಾಗುವದು. ಹೆಚ್.ಕೆ.ಸಿ.ಸಿ.ಐ ಕೋರಿಕೆಯಂತೆ ಕಪನೂರ ವಸಾಹತು ಪ್ರದೇಶದಲ್ಲಿ ಎಕ್ಸಿಬಿಷನ್, ತರಬೇತಿ ಹಾಗೂ ಇನ್‌ಕ್ಯೂಬೇಷನ್ ಸೆಂಟರ್ ಸ್ಥಾಪಿಸಲು ೨ ಎಕರೆ ಜಮೀನು ನೀಡುವ ಸಂಬಂಧ ಅಧಿಕಾರಿಗಳು ಕೂಡಲೆ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಿ ಎಂದು ಸೂಚನೆ ನೀಡಿದರು. ನುಡಿ ಸಮ್ಮೇಳನಕ್ಕೆ ನೆರವು ನೀಡಿ: ನೃಪತುಂಗನ ನೆಲ ಕಲಬುರಗಿಯಲ್ಲಿ ೨೦೨೦ರ ಫೆಬ್ರವರಿ ೫, ೬ ಮತ್ತು ೭ರಂದು ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಜಿಲ್ಲೆಯ ಉದ್ಯಮಿಗಳು ತಮ್ಮದೆಯಾದ ಕೊಡುಗೆಯನ್ನು ನೀಡುವ ಮೂಲಕ ಯಶಸ್ವಿ ಸಮ್ಮೇಳನ ಆಯೋಜನಕ್ಕೆ ಸಹಕರಿಸಬೇಕು ಎಂದು ಉದ್ಯಮಿಗಳಲ್ಲಿ ಮನವಿ ಮಾಡಿಕೊಂಡರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ವಿ. ರಘೋಜಿ, ಸಹಾಯಕ ನಿರ್ದೇಶಕ ಅಬ್ದುಲ್ ಅಜೀಂ, ಕೆಎಸ್‌ಎಸ್‌ಐಡಿಸಿ ಎಜಿಎಮ್ ದಯಾನಂದ, ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಪ್ರಕಾಶ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಮಂಜುನಾಥ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಮಂಜಪ್ಪ ಸೇರಿದಂತೆ ವಿವಿಧ ಕೈಗಾರಿಕಾ ವಸಾಹತು ಪ್ರದೇಶದ ಕೈಗಾರಿಕೋದ್ಯಮಿಗಳ ಸಂಘದ ಪ್ರತಿನಿಧಿಗಳು, ಹೆಚ್.ಕೆ.ಸಿ.ಸಿ.ಐ, ಕಾಸಿಯಾ, ಕೆಲ್ಯಾಂಪ್ ಪ್ರತಿನಿಧಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನಾ ಸಭೆ ಸಹ ಜರುಗಿತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago