ಬೆಂಗಳೂರು: ನಿಮಗೆ ನೀಡಿದ ಭರವಸೆ ಹುಸಿಗೊಳಿಸಿಸಲ್ಲ, ವಿಶ್ವಾಸ ದ್ರೋಹ ಮಾಡಲ್ಲ ಎಂದು ಬಿಜೆಪಿ ಸೇರಿದ ಅನರ್ಹ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅನರ್ಹ ಶಾಸಕರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸಿಎಂ, ದೇಶದಲ್ಲಿ ಎಲ್ಲೂ 17 ಶಾಸಕರು ರಾಜೀನಾಮೆ ಕೊಟ್ಟ ಇತಿಹಾಸ ಇಲ್ಲ. ಈ ಅಭ್ಯರ್ಥಿಗಳ ಗೆಲುವಿನ ಹೊಣೆ ನಮ್ಮ ಮೇಲಿದೆ. ತನು, ಮನ, ಧನದಿಂದ ಅವರ ಗೆಲುವಿಗೆ ಕಾರಣಕರ್ತರಾಗಬೇಕು.
ಡಿ. 5ರಂದು ಫಲಿತಾಂಶ ಬರಲಿದೆ. ನಂತರ ಈ ಎಲ್ಲಾ ಶಾಸಕರಿಗೆ ದೊಡ್ಡ ಕ್ಷೇತ್ರದಲ್ಲಿ ಸನ್ಮಾನ ಮಾಡುತ್ತೇವೆ ಎಂದಿದ್ದಾರೆ.ಉಮೇಶ್ ಕತ್ತಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ರಮೇಶ್ ಜಿಗಜಿಣಗಿಗೂ ಉಸ್ತುವಾರಿ ನೀಡಿದ್ದೇವೆ. 22 ಸಂಸದರು, ಶಾಸಕರು, ಕಾರ್ಯಕರ್ತರು ನಿಮ್ಮ ಜೊತೆಗೆ ಇದ್ದೇವೆ. ಕೇಂದ್ರದ ನಾಯಕತ್ವ ನಿಮ್ಮ ಜೊತೆ ಇದೆ. ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ನಾನು ತುರ್ತಾಗಿ ತುಮಕೂರಿಗೆ ಹೋಗಬೇಕಿದೆ. ಹೀಗಾಗಿ ನಾನು ಇರಲೇಬೇಕು ಎಂದು ಬಂದಿದ್ದೇನೆ. ಎಲ್ಲರೂ ಜವಾಬ್ದಾರಿಯಿಂದ ನಮ್ಮ ಎಲ್ಲಾ ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸಿ ಎಂದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…