ವಿವಿಗಳಲ್ಲಿ ಸ್ಪರ್ಧೆ ಮಾಡುವಾಗ ಉತ್ತಮ ರೀತಿಯಿಂದ ವರ್ತಿಸಬೇಕು: ಬಸವರಾಜ ದೇಶಮುಖ

ಫೋಟೋ ಸುದ್ದಿ: ೨
ಫೋಟೋ ಸುದ್ದಿ: ೩ ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಎರಡು ದಿನಗಳ ಕಾಲ ನಿರಂತರ ನಡೆದ ವಿಶ್ವವಿದ್ಯಾಲಯದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ದ್ವೀತಿಯ ಸ್ಥಾನ ಸ್ಥಾನಕ್ಕೆ ತೃಪ್ತಿಹೊಂದಿ ಪ್ರಶಸ್ತಿ ಪತ್ರ ಹಾಗೂ ಬಹುಮಾನ ಪಡೆದರು.
ಫೋಟೋ ಸುದ್ದಿ: ೪ ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಎರಡು ದಿನಗಳ ಕಾಲ ನಿರಂತರ ನಡೆದ ವಿಶ್ವವಿದ್ಯಾಲಯದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಬಿಸಿಎ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಗೆ ತೃತೀಯ ಸ್ಥಾನಕ್ಕೆ ಆಯ್ಕೆಯಾಗಿ ಪ್ರಶಸ್ತಿ ಪತ್ರ ಹಾಗೂ ಬಹುಮಾನ ಸ್ವೀಕರಿಸಿದರು.

ವಿಜ್ಞಾನ, ತಂತ್ರಜ್ಞಾನ ವಿಭಾಗಕ್ಕೆ(ದ್ವೀತಿಯ ಸ್ಥಾನ), ಬಿಸಿಎ ಮಹಿಳಾ ಕಾಲೇಜು(ತೃತೀಯ ಸ್ಥಾನ) ಪಡೆದ ಎಲ್ಲಾ ವಿದ್ಯಾರ್ಥಿಗಳು ಪ್ರಶಸ್ತಿ ಪತ್ರ ಹಾಗೂ ಬಹುಮಾನ ಸ್ವೀಕರಿಸಿ ಕುಣಿದುಕುಪ್ಪಳಿಸಿದರು.

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಯುವಜನೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಇತರ ವಿವಿಗಳಲ್ಲಿ ಸ್ಪರ್ಧೆ ಮಾಡುವಾಗ ಉತ್ತಮ ರೀತಿಯಿಂದ ನಡೆದುಕೊಳ್ಳಬೇಕು ಅಂದಾಗ ಮಾತ್ರ. ಶರಣಬಸವ ವಿವಿಗೆ ಕೀರ್ತಿ ಬರುತ್ತದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡ ಶರಣಬಸವ ವಿಶ್ವವಿದ್ಯಾಲಯದ ಯುವಜನೋತ್ಸವದ ಸಮರೂಪ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದ ಅವರು ಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರ ೮೫ನೇ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದರಿಂದ ವಿದ್ಯಾರ್ಥಿಗಳು ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕು. ಇದರಿಂದ ಇನ್ನೊಬ್ಬರ ಬದುಕು ಉಳಿಸಬಹುದಾಗಿದೆ ಎಂದು ತಿಳಿಸಿದರು.

ರಕ್ತದಾನ ಮಾಡುವದರಿಂದ ವ್ಯಕ್ತಿಯು ಆರೋಗ್ಯದಿಂದ ಇರುತ್ತಾನೆ. ಆದರೆ ರಕ್ತದಾನ ಬಗ್ಗೆ ಅರಿವು ಇಲ್ಲದ ಪರಿಣಾಮ ಅದೆಷ್ಟೋ ಜೀವಗಳು ಭಾರತದಲ್ಲಿ ರಕ್ತದ ಕೊರತೆಯಿಂದ ಸಾವುನ್ನಪ್ಪುತ್ತಿದ್ದಾರೆ. ಆದರೆ ಅಪ್ಪಾಜೀಯವರು ಇಂತಹ ಶಿಬಿರ ಆಯೋಜಿಸಿ ರಕ್ತದಕೊರತೆಯಿಂದ ಮರಣ ಹೊಂದುವ ಜೀವಗಳನ್ನು ಉಳಿಸುವ ಒಂದು ಸಣ್ಣ ಪ್ರಯತ್ನ ಅಪ್ಪಾಜೀಯವರು ಮಾಡುತ್ತಿದ್ದಾರೆ ಎಂದು ಹೇಳಿದರು.

ವಿವಿ ಕುಲಪತಿ ಡಾ.ನಿರಂಜನ ನಿಷ್ಠಿ ಮಾತನಾಡಿ, ಯುವಕರು ಒಂದು ವ್ಯವಸ್ಥೆಯನ್ನು ಬದಲಾವಣೆ ಮಾಡುವ ಶಕ್ತಿ ಹೊಂದಿರುತ್ತಾರೆ. ಇದರಿಂದ ಇಂತಹ ಶಕ್ತಿ ಬಳಸಿಕೊಂಡು ನಿಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ಶರಣಬಸವ ಸಂಸ್ಥೆಯಿಂದ ಹೊರಗಡೆ ಹೋಗುವಾಗ ವಿದ್ಯಾರ್ಥಿಗಳು ಜ್ಞಾನದ ಬಂಡಾರ ಪಡೆದುಕೊಂಡು ಹೋಗಬೇಕು. ಇಲ್ಲದಿದ್ದರೆ ಸಂಸ್ಥೆಯ ಘನತೆಗೌರವಕ್ಕೆ ಧಕ್ಕೆ ಬರುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಡಾ.ಅನೀಲಕುಮಾರ ಬಿಡವೆ ಮಾತನಾಡಿದರು.

ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ್ ನಿಷ್ಠಿ, ಸಮಕುಲಪತಿ ಡಾ.ವಿ.ಡಿ. ಮೈತ್ರಿ, ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ, ಡೀನ್ ಡಾ.ಲಕ್ಷ್ಮಿ ಪಾಟೀಲ, ಡೀನ್ ಡಾ.ಬಸವರಾಜ ಮಠಪತಿ, ಪತ್ರಿಕೋದ್ಯಮ ಮುಖ್ಯಸ್ಥ ಟಿ.ವಿ.ಶಿವಾನಂದನ್, ಡಾ.ಶಶಿಕಲಾ, ಡಾ.ರಾಮಕೃಷ್ಣರೆಡ್ಡಿ, ಎಮ್‌ಬಿಎ ವಿಭಾಗದ ಮಖ್ಯಸ್ಥ ಡಾ.ಹರೀಶ ಬಿದನೂರಕರ್, ಇತರರು ಇದ್ದರು. ವಿವಿ ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ ಸ್ವಾಗತಿಸಿದರು. ಪತ್ರಿಕೋದ್ಯಮದ ವಿದ್ಯಾರ್ಥಿ ಗುರುಬಸವ ಜನಪದ ಗೀತೆ ಹಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡಾ.ನಾಗಬಸವಣ್ಣ ಗುರಗೊಳ, ಡಾ.ಅರ್ಜುನ ಶೆಟ್ಟಿ ಅವರು ಕಾರ್ಯಕ್ರಮವನ್ನು ಆಯೋಜಿಸಿದರು. ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಎರಡು ದಿನಗಳ ಕಾಲ ನಿರಂತರ ನಡೆದ ವಿಶ್ವವಿದ್ಯಾಲಯದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಎರಡು ದಿನಗಳ ಕಾಲ ನಿರಂತರ ನಡೆದ ವಿಶ್ವವಿದ್ಯಾಲಯದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿ ಇಡೀ ವಿಶ್ವವಿದ್ಯಾಲಯಕ್ಕೆ ಬಿ,ಟ್ಯಾಕ್ ಗೋದುತಾಯಿ ಮಹಿಳಾ ಎಂಜಿನಿಯರಿಂಗ್ ಕಾಲೇಜಿಗೆ(ಪ್ರಥಮ ಸ್ಥಾನ), ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗಕ್ಕೆ(ದ್ವೀತಿಯ ಸ್ಥಾನ), ಬಿಸಿಎ ಮಹಿಳಾ ಕಾಲೇಜು(ತೃತೀಯ ಸ್ಥಾನ) ಪಡೆದ ಎಲ್ಲಾ ವಿದ್ಯಾರ್ಥಿಗಳು ಪ್ರಶಸ್ತಿ ಪತ್ರ ಹಾಗೂ ಬಹುಮಾನ ಸ್ವೀಕರಿಸಿ ಕುಣಿದುಕುಪ್ಪಳಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420