ಕಲಬುರಗಿ: ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ ಅವರ 85ನೇ ಜನ್ಮದಿನದಂಗವಾಗಿ ಹೊರವಲಯದ ಮಹಾದೇವಿ ತಾಯಿ ವೃದ್ಧಾಶ್ರಮದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮವೊಂದನ್ನು ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನ ಹಾಗೂ ಮೋಹನರಾಜ್ ಆಸ್ಪತ್ರೆ ಸಹೋಯೋಗದಡಿ ನಡೆಯಿತು.
ಪ್ರತಿಷ್ಠಾನದ ಸಂಸ್ಥಾಪಕರೂ ಆದ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕಲ್ಯಾಣ ನಾಡಿನ ಶೈಕ್ಷಣಿಕ ರಂಗದಲ್ಲಿ ಶ್ರೇಷ್ಠ ಕೊಡುಗೆ ನೀಡುವ ಮೂಲಕ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರು, ಈ ರಾಷ್ಟ್ರ ಕಂಡ ಅಪರೂಪದ ಶಕ್ತಿಯಾಗಿದ್ದಾರೆ. ಅವರ ಹುಟ್ಟು ಹಬ್ಬ ಸಂಸ್ಥೆಗೆ ಸೀಮಿತಗೊಳಿಸದೇ ಸಾರ್ವತ್ರಿಕವಾಗಿ ಆಚರಿಸುವಂತಾಗಬೇಕು ಎಂದು ಹೇಳಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್ ಠಾಕೂರ್ ಮಾತನಾಡಿ, ಈ ಭಾಗದ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಬೆಳಕು ಕೊಟ್ಟ ಶ್ರೇಯಸ್ಸು ಅಪ್ಪಾಜೀ ಅವರಿಗೆ ಸಲ್ಲುತ್ತದೆ ಎಂದರು. ಎಪಿಎಂಸಿ ಮಾಜಿ ಅಧ್ಯಕ್ಷ ಶರಣಬಸಪ್ಪ ಭೂಸನೂರ ಮಾತನಾಡಿ, ಪೂಜ್ಯ ಶ್ರೀ ಡಾ ಶರಣಬಸವಪ್ಪ ಅಪ್ಪಾಜೀ ಅವರು ಒಬ್ಬ ವ್ಯಕ್ತಿ ಅಲ್ಲ. ಬದಲಾಗಿ ಬಹು ದೊಡ್ಡ ಶಕ್ತಿಯಾಗಿದ್ದಾರೆ. ಅವರ ಕಾಯಕ ನಿಷ್ಠೆ ಇಂದಿನ ಸಮಾಜಕ್ಕೆ ಮಾದರಿಯಾದುದು ಎಂದು ಮನದುಂಬಿ ಹೇಳಿದರು.
ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ಪ್ರಮುಖರಾದ ಶಿವಾನಂದ ಮಠಪತಿ, ಸವಿತಾ ಪಾಟೀಲ್, ಡಾ.ದೇವಾನಂದ ಬಿರಾದಾರ, ಡಾ.ನಿವೇದಿತಾ ಬಿರಾದಾರ, ನೀಲಾಂಬಿಕಾ ಚೌಕಿಮಠ, ಸಂಘದ ಜಲಜಾಕ್ಷಿ ಕೋರೆ, ಪರಮೇಶ್ವರ ಶಟಕಾರ, ರವೀಂದ್ರಕುಮಾರ ಭಂಟನಳ್ಳಿ, ಜಗದೀಶ ಮರಪಳ್ಳಿ, ಹಣಮಂತರಾಯ ಅಟ್ಟೂರ, ಸೇರಿ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…