ಬಿಸಿ ಬಿಸಿ ಸುದ್ದಿ

ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ನವೆಂಬರ್ 30 ರವರೆಗೆ ವಿಸ್ತರಣೆ

ಕಲಬುರಗಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತದಾರರ ದೃಢೀಕರಣ ಕಾರ್ಯಕ್ರಮವು ೨೦೧೯ರ ನವೆಂಬರ್ ೩೦ ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ.ಶರತ್ ಅವರು ತಿಳಿಸಿದ್ದಾರೆ.

01-01-2020 ಅರ್ಹತಾ ದಿನಾಂಕ ಆಧರಿಸಿ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ಈಗಾಗಲೆ ಜಿಲ್ಲೆಯಲ್ಲಿ ಚಾಲ್ತಿಯಲ್ಲಿದ್ದು, ಯಾವುದೇ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಮತ್ತು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ನವೆಂಬರ್ ೧೮ರ ವರೆಗೆ ಇದ್ದ ಪರಿಶೀಲನಾ ಕಾರ್ಯವನ್ನು ನವೆಂಬರ್ ೩೦ರ ವರೆಗೆ ವಿಸ್ತರಿಸಿ ಭಾರತ ಚುನಾವಣಾ ಆಯೋಗವು ಪರಿಷ್ಕೃತ (EVP) ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ಮತದಾರರ ಸಮಗ್ರ ಕರಡು ಮತದಾರ ಪಟ್ಟಿಯನ್ನು ಡಿಸೆಂಬರ್ ೧೬ರಂದು ಪ್ರಕಟಿಸಲಾಗುತ್ತದೆ. ಡಿಸೆಂಬರ್ ೧೬ ರಿಂದ ೨೦೨೦ರ ಜನವರಿ ೧೫ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಜನವರಿ ೨೭ರೊಳಗೆ ಎಲ್ಲಾ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ ಅಂತಿಮ ಮತದಾರರ ಪಟ್ಟಿಯನ್ನು ೨೦೨೦ನೇ ಫೆಬ್ರವರಿ ೭ ರಂದು ಪ್ರಕಟಿಸಲಾಗುತ್ತದೆ ಎಂದರು.

ಆದರಿಂದ ಜಿಲ್ಲೆಯ ಎಲ್ಲಾ ಅರ್ಹ ಮತದಾರರು ನ್ಯಾಷನಲ್ ವೋಟರ‍್ಸ್ ಸರ್ವಿಸ್ ಪೋರ್ಟಲ್ http://www.nvsp.in ವೋಟರ್ ಹೆಲ್ಪ್‌ಲೈನ್ ಆಪ್, ಕಾಮನ್ ಸರ್ವಿಸ್ ಸೆಂಟರ‍್ಸ್ ಹಾಗೂ ವೋಟರ್ ಫಿಸಿಲಿಟೇಶನ್ ಸೆಂಟರ್ (Facilitation center) ಮೂಲಕ ಕಡ್ಡಾಯವಾಗಿ ತಮ್ಮ ಮತದಾರರ ಪಟ್ಟಿಯಲ್ಲಿರುವ ತಮ್ಮ ವಿವರಗಳನ್ನು ಶೇ.೧೦೦ರಷ್ಟು ದೃಢೀಕರಿಸಿಕೊಳ್ಳುವ ಮೂಲಕ ದೋಷರಹಿತ ಮತದಾರ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಶರತ್ ಅವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮತದಾರರು ಈ ಅವಕಾಶದ ಸದುಪಯೋಗಪಡಿಸಿಕೊಳ್ಳದೆ ಹೋದಲ್ಲಿ ಚುನಾವಣೆಯ ಮತದಾನ ದಿನದಂದು ಪಟ್ಟಿಯಲ್ಲಿನ ತಿದ್ದುಪಡಿಗೆ ಯಾವುದೇ ಅವಕಾಶವಿರುವುದಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago