ಕಲಬುರಗಿ: ರೇವಗ್ಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಭಾರತದ ಮೊದಲ ಪ್ರಧಾನ ಮಂತ್ರಿಗಳಾದ ಪಂಡಿತ ಜವಹಾರಲಾಲ ನೆಹರು ಅವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆ ಯನ್ನಾಗಿ ಆಚರಿಸಲಾಗುತ್ತಿದೆ.
ಸರಕಾರವು ಮಕ್ಕಳ ಸರ್ವೋತೋಮುಖ ಬೆಳವಣಿಗೆಗಾಗಿ ಕಡ್ಡಾಯ ಶಿಕ್ಷಣ ಮತ್ತು ಹಕ್ಕುಗಳ ರಕ್ಷಣೆಗೆ ಹಲವಾರು ಕಾನೂನುಗಳನ್ನು ಜಾರಿಗೊಳಿಸಿದೆ. ಅಲ್ಲದೆ ಪೌಷ್ಠಿಕಯುಕ್ತ ಆಹಾರ ನೀಡಿ ಆರೋಗ್ಯಕರ ಭಾರತಕ್ಕಾಗಿ ಆರೋಗ್ಯವಂತ ಮಕ್ಕಳನ್ನು ಪೋಷಿಸುವ ಕಾರ್ಯ ಮಾಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯು ಸಹ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಾರ್ಗಸೂಚಿಗಳನ್ನು ಆಯಾ ರಾಷ್ಟ್ರದ ಸರಕಾರಗಳಿಗೆ ನೀಡುತ್ತಿದೆ. ಆದುದರಿಂದ ಇಂದಿನ ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಸಂಸ್ಕೃತಿ ಬೆಳಸಿಕೊಂಡು ಜ್ಞಾನದ ಶಿಖರಗಳಾಗಬೇಕೆಂದು ಎನ್.ಎಸ್.ಎಸ್. ಕಲಬುರಗಿ ವಿಭಾಗದ ಅಧಿಕಾರಿಗಳಾದ ಡಾ. ಚಂದ್ರಶೇಖರ ದೊಡ್ಡಮನಿ ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕಾಶಿನಾಥ ಮುಖರ್ಜಿ ಮಾತನಾಡಿದರು. ಪ್ರಾಚಾರ್ಯರಾದ ಶಿವಾಜಿ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.ಉಪನ್ಯಾಸಕರುಗಳಾದ ವಿಜಯಕುಮಾರ ತೋರಣಿಕರ್, ಶರೀಫ ಎಂ.ಎಫ. ಮತ್ತು ಲಕ್ಷ್ಮೀ ವೇಲುಸ್ವಾಮಿ ಮುಂತಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪಲ್ಲವಿ ಆರ್. ನಿರೂಪಿಸಿದರು. ದಿವ್ಯಾರಾಣಿ ಸ್ವಾಗತಿಸಿದರು. ದೀಪಿಕಾ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…