ಬಿಸಿ ಬಿಸಿ ಸುದ್ದಿ

ಮಾದರಿ ರಾಜಕಾರಣಿ ದರ್ಶನಾಪುರ: ಸಂಸದ ಡಾ. ಉಮೇಶ ಜಾಧವ

ಶಹಾಪುರ: ಈ ಭಾಗದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ ದಿ. ಬಾಪೂಗೌಡ ದರ್ಶನಾಪುರ ಅವರಿಗೆ ಈ ಭಾಗದ ಸಮಗ್ರ ಅಭಿವೃದ್ಧಿ ಬಗ್ಗೆ ನಿಜವಾದ ಕಾಳಜಿ ಇತ್ತು ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹೇಳಿದರು.

ನಗರದ ಚರಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ಇಂದು ಹಮ್ಮಿಕೊಂಡಿದ್ದ ದಿ. ಬಾಪೂಗೌಡ ದರ್ಶನಾಪುರ ಅವರ 31ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗಕ್ಕೆ ಹಸಿರುಣಿಸಿದ ಕೃಷ್ಣಾ ಮೇಲ್ದಂಡೆ ಯೋಜನೆ, ಚರಬಸವೇಶ್ವರ ಶಿಕ್ಷಣ ಸಂಸ್ಥೆ, ರಾಜ್ಯದ ಹೌಸಿಂಗ್ ಬೋರ್ಡ್, ಈ ಭಾಗದ ಹಲವು ನೀರಾವರಿ ಯೋಜನೆಗಳು ಸೇರಿದಂತೆ ಇನ್ನು ಹಲವಾರು ಕಾರ್ಯಗಳು ಅವರ ದೂರದೃಷ್ಟಿಯ ಫಲಗಳಾಗಿವೆ ಎಂದು ಸ್ಮರಿಸಿದರು.

ಯಾವೊತ್ತು ದ್ವೇಷದ ರಾಜಕಾರಣ ಮಾಡದ ಅವರು, ಈ ಭಾಗದ ಏಳಿಗೆಗೆ ಹಗಲು ರಾತ್ರಿ ಶ್ರಮಿಸಿದವರಾಗಿದ್ದರು. ಅವರ ಪುತ್ರ ಕ್ಷೇತ್ರದ ಶಾಸಕ ಶರಣ ಬಸಪ್ಪಗೌಡ ದರ್ಶನಾಪುರ ಸಹ ಒಬ್ಬ ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಶರಣ ಮಾರ್ಗ ಪತ್ರಿಕೆಯ ಉಲ್ಲೇಖ: ಶರಣ ಮಾರ್ಗ ಪತ್ರಿಕೆಯಲ್ಲಿ ಬಂದ ಸತ್ಯಂಪೇಟೆ ಯವರ ಲೇಖನ ಉಲ್ಲೇಖಿಸಿದ ಸಂಸದ ಡಾ. ಉಮೇಶ ಜಾಧವ ಅವರು, ಬಾಪೂಗೌಡ ದರ್ಶನಾಪುರ ಅವರು ಇಂದಿನ ನಮ್ಮಂತಹ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದರು..

ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಗಾಂಧಿ, ನೆಹರೂ, ಜೆಪಿ ಮುಂತಾದವರ ವಿಚಾರಗಳಿಂದ ಪ್ರಭಾವಿತಾರಗಿದ್ದ ಗೌಡರು, ಸ್ವಾತಂತ್ರ್ಯ ಹೋರಾಟದ ಜೊತೆಗೆ ಹೈದರಾಬಾದ್ ಕರ್ನಾಟಕ ಏಕೀಕರಣ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು. ಅವರ ಕಾರ್ಯಗಳನ್ನು ಅವರ ಪುತ್ರ ಶರಣಬಸಪ್ಪ ದರ್ಶನಾಪುರ ಮುಂದುವರಿಸಿಕೊಂಡು ಬರುತ್ತಿರುವುದು ಆಶಾದಾಯಕವಾದ ಸಂಗತಿ ಎಂದರು.

ಚರಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಬಸವರಾಜಪ್ಪಗೌಡ ದರ್ಶನಾಪುರ, ಯಾದಗಿರಿ ಜಿಪಂ ಅಧ್ಯಕ್ಷ ರಾಜಶೇಖರ ಪಾಟೀಲ ವಜ್ಜಲ್, ನ್ಯಾಯವಾದಿ ಶ್ರೀನಿವಾಸರಾವ ಕುಲಕರ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಆರಬೋಳ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಸವರಾಜ ವಾಲಿ, ನಿರ್ದೇಶಕ ಸೋಮಶೇಖರ ಗೋನಾಯಕ, ಜಿಪಂ ಮಾಜಿ ಸದಸ್ಯ ಬಸನಗೌಡ ಸುಬೇದಾರ, ಜಿಪಂ ಸದಸ್ಯ ಕಿಶನ್ ರಾಠೋಡ್, ನಿವೃತ್ತ ಇಂಜಿನಿಯರ್ ಭೀಮರೆಡ್ಡಿ ಭೈರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಶಂಕ್ರಣ್ಣ ವಣಿಕ್ಯಾಳ ವೇದಿಕೆಯಲ್ಲಿದ್ದರು. ಶಾಸಕ ಶರಣ ಬಸಪ್ಪಗೌಡ ದರ್ಶನಾಪುರ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಅಧ್ಯಕ್ಷ ಘೇವರಚಂದ ಜೈನ್ ಪ್ರಾಸ್ತಾವಿಕ ಮಾತನಾಡಿದರು. ಶಿವಲಿಂಗನಗೌಡ ನಿರೂಪಿಸಿದರು. ಚರಬಸವೇಶ್ವರ ಸಂಸ್ಥಾನದ ಪೂಜ್ಯ ಬಸವಯ್ಯ ಶರಣರು ಸಾನ್ನಿಧ್ಯ ವಹಿಸಿದ್ದರು.

ಇದಕ್ಕೂ ಮುನ್ನ ಭೀಮರಾಯನಗುಡಿಯಲ್ಲಿರುವ ಬಾಪೂಗೌಡ ದರ್ಶನಾಪುರ ಪುತ್ಥಳಿಗೆ ಮುಖಂಡರು ಮಾಲಾರ್ಪಣೆ ಮಾಡಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago