ಬಿಸಿ ಬಿಸಿ ಸುದ್ದಿ

ಕನಕದಾಸರ ತತ್ವ ಆದರ್ಶಗಳು ನಾವೆಲ್ಲರೂ ಪಾಲಿಸಬೇಕು: ಶಾಸಕ ಬಸವರಾಜ ಮತ್ತಿಮಡು

ಕಲಬುರಗಿ: ಭಕ್ತ ಕನಕದಾಸರು ತಮ್ಮ ಅನೇಕ ಕೀರ್ತನೆಗಳ ಮೂಲಕ ಶ್ರಮಿಸಿದ್ದಾರೆ ಹಾಗಾಗಿ ಕನಕದಾಸರ ತತ್ವ ಆದರ್ಶಗಳನ್ನು ಇಂದು ನಾವೆಲ್ಲರೂ ಪಾಲಿಸಬೇಕು. ಹಾಗೆಯೇ ಭಕ್ತಿ ಮಾರ್ಗದಲ್ಲಿ ಸಮಾಜದ ಕೊಳಕುಗಳನ್ನು ಕಳೆದ ಕನಕದಾಸರ ಆದರ್ಶವನ್ನು ಇಂದು ನಾವೆಲ್ಲರೂ ಪಾಲಿಸಬೇಕು ಎಂದು ಗ್ರಾಮೀಣ ಮತ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಇಂದು ನಗರದ ಎಸ್‌ ಎಮ್ ಪಂಡಿತ ರಂಗಮಂದಿರದಲ್ಲಿ ಭಕ್ತ ಕನಕದಾಸರ 532ನೇ ಜಯಂತಿ ನಿಮಿತ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಭಕ್ತಿಯ ಮೂಲಕ ಹೃದಯ ಪರಿವರ್ತನೆಯ ಮಾರ್ಗ ಹಿಡಿದ ಭಕ್ತ ಕನಕದಾಸರ ಇಂದಿನ ಜಗತ್ತಿನಲ್ಲಿ ಜಾತಿ, ಮತ, ಧರ್ಮ, ಭ್ರಷ್ಟಾಚಾರ, ಕಂದಾಚಾರ, ಪ್ರಕೃತಿ ವಿಕೋಪಗಳಿಂದ ತುಂಬಿ ತುಳುಕುತ್ತಿದೆ. ಇವುಗಳಿಗೆ ಪರಿಹಾರ ಎಂದರೆ ದಾಸಶ್ರೇಷ್ಠ ಭಕ್ತ ಕನಕದಾಸರ ದಾರ್ಶನಿಕ  ತತ್ವಗಳನ್ನು ನಾವುಗಳು ಪಾಲಿಸಬೇಕು ಎಂದು ಕರೆ ನೀಡಿದರು.

ನಮ್ಮಲ್ಲಿ ಬೇರೂರಿರುವ ಕುಲದ ಬೇರುಗಳನ್ನು ಅಂದಿನ ಕಾಲದಲ್ಲಿಯೇ ಕಿತ್ತೆಗೆದು ಹಾಕಿದವರು ಕನಕದಾಸರು.  ಸಮಾಜದಲ್ಲಿ ಸಮಾನತೆಯನ್ನು ಮೂಡಿಸುವ ದಾಸ ಶ್ರೇಷ್ಠ ಕಾರ್ಯವಾಗಿತ್ತು. ಕನಕದಾಸರ ಭಕ್ತಿಗೆ ಮೆಚ್ಚಿದ ಕೃಷ್ಣ ಪೂರ್ವ ದಿಕ್ಕಿನಿಂದ ಪಶ್ಚಿಮ ದಿಕ್ಕಿಗೆ ತಿರುಗಿದ್ದು ಇತಿಹಾಸ ಹಾಗೂ ಜನಮಾನಸದಲ್ಲಿ ದಾಖಲಾಗಿದೆ. ಭಕ್ತಿಯ ಮೂಲಕ ದೇವರನ್ನು ತನ್ನ ಕಡೆಗೆ ತಿರುಗಿಸಿಕೊಂಡು ಕನಕದಾಸರು ಭಗವಂತನಿಗೆ ಸಮಾನರಾಗಿದ್ದಾರೆ.  ಇಂದಿನ ಯುವಕರು ಗುರುಗಳಿಗೆ ನಮ್ಮ ತಂದೆ ತಾಯಿಗಳಿಗೆ ಗೌರವಿಸುವ ಮತ್ತು ಪ್ರೀತಿಸುವ ಗುಣ ಬೆಳೆಸಿಕೊಳ್ಳಬೇಕು. ಅಂದಾಗ  ಮಾತ್ರ ಈ ಸಮಾಜ ಒಳ್ಳೆಯ ರೀತಿಯಲ್ಲಿ ನಿರ್ಣಾಮ ಮಾಡಲಿಕ್ಕೆ ಸಾಧ್ಯವಾಗುತ್ತದೆ ಎಂದರು.ಮಹಾತ್ಮರ ಸ್ಮರಣೆ  ನಮ್ಮೆಲ್ಲರಿಗೂ ಪ್ರೇರಣೆ ಆಗಬೇಕು. ಆ ಮೂಲಕ ಈ ಸಮಾಜದ ಒಳಿತಿಗಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ತಿಂತಣಿ ಬ್ರಿಡ್ಜ್ ಕಾಗಿನೆಲೆ ಕನಕಗುರು ಪೀಠದ ಪೂಜ್ಯ ಶ್ರೀ ಲಿಂಗಬೀರ ದೇವರು ಅವರು ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ.ಪಾಟೀಲ್, ಎಸ್.ಪಿ. ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ. ಪಿ.ರಾಜಾ, ಡಿಸಿಪಿ ಕಿಶೋರ ಬಾಬು, ಅಪರ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಿಕ್ಯಾಳ, ಪ್ರೊಬೇಷನರ್ ಐ.ಎ.ಎಸ್ ಅಧಿಕಾರಿ ಡಾ.ಬಿ.ಗೋಪಾಲಕೃಣ ಸೇರಿದಂತೆ ಸಮಾಜದ ಮುಖಂಡರು, ಗಣ್ಯರು ನೂರಾರು ಸಂಖ್ಯೆಯಲ್ಲಿ ಸೇರಿದ ಸಮುದಾಯ ಬಾಂಧವರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸ್ವಾಗತಿಸಿದರು. ಶಿವಾನಂದ ಅಣಜಗಿ ನಿರೂಪಿಸಿ ವಂದಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago