ಮೈಸೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಮರೆಮಾಚುವ ಸಂಚಿನ ಹಿಂದಿರುವ ಸಿಎಂಸಿಎ ಎಂಬ ಸೇವಾಸಂಸ್ಥೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಜಾಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಲ್ಲಿ ಪ್ರತಿಭಟನೆ ನಡೆಸಿ ಆಗ್ರಹಿದರು.
ನಗರದ ಟೌನ್ ಹಾಲ್ನ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಅವರೊಬ್ಬರೆ ಬರೆದಿಲ್ಲ ಎಂಬ ಬೆಂಗಳೂರಿನ ಸಿಎಂಸಿಎ (Children’s Movement for Civil Awareness) ಸೇವಾ ಸಂಸ್ಥೆಯ ಸಿದ್ದಪಡಿಸಿದ ಸುತ್ತೋಲೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ ಹೊರಡಿಸಿರುವ ಕಾರ್ಯ ಸೂಚಿಯನ್ನು ಖಂಡಿಸಲಾಯಿತು. ಸಂವಿಧಾನವನ್ನು ಮರೆ ಮಾಚು ಸಂಚು ಮನುವಾದಿಗಳು ನಡೆಸುತಿದ್ದು, ಇದು ಸಂವಿಧಾನ ವಿರೋಧಿ ನೀತಿ ಹಾಗೂ ದೇಶ ದ್ರೋಹ ಕೆಲಸವಾಗಿದೆ ಎಂದು ವೇದಿಕೆಯ ಕೆ. ಎಸ್. ಶಿವರಾಂ ಆಕ್ರೋಶ ವ್ಯಕ್ತಪಡಿಸಿದರು.
ಯುವ ಮುಖಂಡರುಗಳಾದ ಜಾಕಿರ್ ಹುಸೇನ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯು ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟಂತಹ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಹೊತ್ತಿನಲ್ಲಿ ಸಂವಿಧಾನವನ್ನು ಬುಡಮೇಲು ಮಾಡುವಂತಹ ಕೃತ್ಯ ಕೋಮುವಾದಿಗಳಿಂದ ಮತ್ತು ಬಿಜೆಪಿ ಸರ್ಕಾರದಿಂದ ನಡೆಯುತ್ತಿರುವುದು ತೀವ್ರ ವಿಷಾಧನೀಯ.
ಈ ಕೂಡಲೇ ಸಿಎಂಸಿಎ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಸಂಸ್ಥೆಯ ವಿರುದ್ದ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಬೇಜವಾಬ್ದಾರಿತನ ಪ್ರದರ್ಶಿಸಿರುವ ಮತ್ತು ಸಂವಿಧಾನ ಆಶಯವನ್ನು ಬುಡಮೇಲು ಮಾಡಲು ಸಹಕರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸ ಬೇಕೆಂದು ಪ್ರತಿಭಟನಾ ಕಾರರು ಒತ್ತಾಯಿಸಿದರು.
ಪ್ರತಿಭಟನಾ ಧರಣಿಯಲ್ಲಿ ಪುಗತಿಪರ ಚಿಂತಕರಾದ ಪ್ರೊ. ಮಹೇಶ್ ಚಂದ್ರಗುರು, ಪ್ರೊ. ಕೆ.ಎಸ್. ಭಗವಾನ್, ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷರಾದ ಹೆಚ್.ಎಸ್. ಪ್ರಕಾಶ್, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ವಿ.ಮಂಜುನಾಥ್, ಎನ್.ಆರ್, ನಾಗೇಶ್, ಜಿಲ್ಲಾ ವಿಶ್ವಕರ್ಮ ಜನಾಂಗದ ಮುಖಂಡರಾದ ಸಿ.ಟಿ, ಆಚಾರ್ಯ, ಚಂದ್ರು ವಿಶ್ವಕರ್ಮ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷರಾದ ಜಯರಾಂ, ಸತ್ಯನಾರಾಯಣ್, ಮಾನವ ಬಂಧುತ್ವ ವೇದಿಕೆಯ ಅಧ್ಯಕ್ಷರಾದ ಎಸ್.ಆರ್. ರವಿ, ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷರಾದ ಹಿನಕಲ್ ಪ್ರಕಾಶ್, ಸಮೃದ್ಧಿ ಯುವ ವೇದಿಕೆಯ ಅಧ್ಯಕ್ಷರಾದ ಸುರೇಶ್, ಜಿಲ್ಲಾ ಮಾದಿಗರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಆರ್. ಸುನಂದಕುಮಾರ್, ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ದ್ಯಾವಪ್ಪನಾಯಕ, ಕಾಂಗ್ರೆಸ್ ಮುಖಂಡರಾದ ಶೌಕತ್ ಅಲಿಖಾನ್, ತ್ಯಾಗರಾಜ್, ನಿಹಾಲ್, ಅಖಿಲ ಕರ್ನಾಟಕ ಕ್ರೈಸ್ತ ಪ್ರಗತಿ ಸೇವಾ ಸಂಸ್ಥೆಯ ಉಪಾಧ್ಯಕ್ಷರಾದ ಆರೋಗ್ಯಸ್ವಾಮಿ (ಆಲ್ಬರ್ಟ್),ಎಡಿನ್ ರಿಚರ್ಡ್, ಕಾಡಿನಹಳ್ಳಿ ಸ್ವಾಮಿ, ದೊಡ್ಡಹುಂಡಿ ಪ್ರಸನ್ನ, ಶಶಾಂಕ್, ಚಿಕ್ಕಸ್ವಾಮಿ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…