ಬಿಸಿ ಬಿಸಿ ಸುದ್ದಿ

ಇದೇ 22 ರಂದು ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಭಾಗಿ

ಕಲಬುರಗಿ: ಇದೇ ನವೆಂಬರ್ ೨೨ ರಂದು ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಸೇರಿದಂತೆ ಕೇಂದ್ರ ವಿಮಾನಯಾನ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರದಮದಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಡಳಿತ ಮತ್ತು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳು ಸಾಂಘಿಕವಾಗಿ ಕಾರ್ಯನಿರ್ವಹಿಸುವಂತೆ ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅಧಿಕಾರಿಗಳಿಗೆ ತಿಳಿಸಿದರು.

ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಶನಿವಾರ ಕರೆದಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಏರ್‌ಪೋರ್ಟ್ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದರಿಂದ ಡಿಜಿಸಿಎ ನಿಯಮಾನುಸಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಉದ್ಘಾಟನಾ ಕಾರ್ಯಕ್ರಮದ ವೇದಿಕೆ ಸೇರಿದಂತೆ ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆ ಮಾಡಬೇಕು. ಶಿಷ್ಠಚಾರದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಆಮಂತ್ರಣ ಪತ್ರಿಕೆ ಮುಂಚಿತವಾಗಿ ತಲುಪಿಸಬೇಕು. ಈ ಭಾಗದಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿರುವುದರಿಂದ ಎಲ್ಲಾ ವಿಶ್ವವಿದ್ಯಾಲಯಗಳು, ಖಾಸಗಿ ಡೀಮ್ಡ್ ವಿಶ್ವವಿದ್ಯಾಲಯಗಳು, ಉದ್ಯಮಿಗಳನ್ನು, ಸಿಮೆಂಟ್ ಕಂಪನಿ ಉದ್ಯಮಿಗಳನ್ನು, ಶಿಕ್ಷಣ-ಸಂಸ್ಥೆಗಳು, ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನು ಆಹ್ವಾನಿಸಬೇಕು ಎಂದರು.

ವಿಮಾನ ನಿಲ್ದಾಣ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಸುಮಾರು ೫೦೦೦ ಜನಸಂಖ್ಯೆಗೆ ಆಸನ ವ್ಯವಸ್ಥೆ ಮಾಡಬೇಕು. ಭದ್ರತಾ ದೃಷ್ಠಿಯಿಂದ ಗಣ್ಯರಿಗೆ, ಮಾಧ್ಯಮದವರಿಗೆ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರತ್ಯೇಕ ಪಾಸ್ ವಿತರಿಸಬೇಕು. ಎಲ್ಲೆಡೆ ಸ್ವಚ್ಛತೆ ಮತ್ತು ಸೌಂದರ್ಯೀಕರಣ ಕೈಗೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯ ಕೈಗೊಳ್ಳಬೇಕು. ಎಲ್ಲಿಯೂ ಪ್ಲಾಸ್ಟಿಕ್ ಬಳಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಭಾರತೀಯ ವಿಮಾನಯಾನ ಪ್ರಾಧಿಕಾರದ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರ ರಾವ್ ಅವರಿಗೆ ನಿರ್ದೇಶನ ನೀಡಿದರು.

ಕಾರ್ಯಕ್ರಮದ ಯಶಸ್ಸಿಗೆ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳಿಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರವನ್ನು ನೀಡಬೇಕು. ವಿಮಾನ ನಿಲ್ದಾಣದ ಆವರಣದ ಹೊರಗಡೆ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಮತ್ತು ವಿಮಾನ ನಿಲ್ದಾಣ ಮತ್ತು ಕಾರ್ಯಕ್ರಮ ಸುತ್ತಮುತ್ತ ಅಗತ್ಯ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು ಎಂದು ಡಿಸಿಪಿ ಕಿಶೋರ ಬಾಬು ಅವರಿಗೆ ಡಾ.ಉಮೇಶ ಜಾಧವ ಅವರು ನಿರ್ದೇಶನ ನೀಡಿದರು. ಕಲಬುರಗಿ-ಬೆಂಗಳೂರು ಮಧ್ಯೆ ಈಗಾಗಲೆ ಸ್ಟಾರ್ ಏರ್ ಸಂಸ್ಥೆ ವಿಮಾನ ಸಂಚಾರಕ್ಕೆ ಅಣಿಗೊಂಡಿದ್ದು, ಏರ್ ಇಂಡಿಯಾದಿಂದಲೂ ಈ ಮಾರ್ಗದಲ್ಲಿ ವಿಮಾನಗಳು ಸಂಚರಿಸಲಿವೆ. ಇದಲ್ಲದೆ ಕಲಬುರಗಿ-ಹೈದ್ರಾಬಾದ್ ನಡುವೆ ವಿಮಾನ ಸಂಚಾರಕ್ಕೆ ಇಂಡಿಗೋ ಏರ್‌ಲೈನ್ಸ್‌ನೊಂದಿಗೆ ಸಹ ಚರ್ಚೆ ನಡೆದಿದೆ ಎಂದರು.

ಸಭೆಯಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಹೆಚ್.ಕೆ.ಸಿ.ಸಿ.ಐ ಅಧ್ಯಕ್ಷ ಅಮರನಾಥ ಪಾಟೀಲ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳೀಕರ ಸೇರಿದಂತೆ ಸಂಬಂಧಟಪ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago