ಬಿಸಿ ಬಿಸಿ ಸುದ್ದಿ

20 ರಂದು ದಾಸ ಅಲಮಾರಿ ಜನಾಂಗದ ಸರ್ಕಾರಿ ಸೌಲಭ್ಯಗಳಿಗೆ ಆಗ್ರಹಿಸಿ ಧರಣಿ

ಕಲಬುರಗಿ: ಜಿಲ್ಲೆಯ ನೂತನ ತಾಲ್ಲೂಕು ಕೇಂದ್ರವಾದ ಕಮಲಾಪೂರ್ ಪಟ್ಟಣದಲ್ಲಿ ಕಳೆದ 50 ವರ್ಷಗಳಿಂದ ವಾಸವಾಗಿರುವ ಸುಮಾರು 20 ದಾಸ (ಹೊಲೆಯ) ಸಮುದಾಯದ ಅಲೆಮಾರಿ ಜನಾಂಗಕ್ಕೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ನವೆಂಬರ್ ೨೦ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾಂಕೇತಿಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಅರ್ಜುನ್ ಭದ್ರೆ ಅವರು ಇಲ್ಲಿ ಹೇಳಿದರು.

ಶನಿವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲತ: ಕಮಲಾಪೂರ್ ಪಟ್ಟಣದ ನಿವಾಸಿಗಳಾದ ದಾಸ ಅಲೆಮಾರಿ ಜನಾಂಗವು ಇಲ್ಲಿಯವರೆಗೆ ಸರ್ಕಾರದ ಯಾವುದೇ ಸೌಲತ್ತು ಇಲ್ಲದೇ ಅತ್ಯಂತ ದಯನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಕಮಲಾಪೂರ್ ಪಟ್ಟಣದ ಹೊರವಲಯದಲ್ಲಿರುವ ಸರ್ವೆ ನಂಬರ್ ೪೯ ಸರ್ಕಾರಿ ಗೈರಾಣಿ ಜಮೀನಿನಲ್ಲಿ ತಾತ್ಕಾಲಿಕ ಶೆಡ್‌ನಲ್ಲಿ ವಾಸಿಸುತ್ತಿರುವ ದಾಸ ಸಮುದಾಯವು ಇಡೀ ರಾತ್ರಿ ಮಕ್ಕಳನ್ನು ಮಡಿಲಲ್ಲಿ ಇಟ್ಟುಕೊಂಡು ಕಾಲ ಕಳೆಯುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಕಾಡು ಹಂದಿಗಳು, ಹಾವು, ಚೇಳು, ವಿಷಪೂರಿತ ಜೀವ ಜಂತುಗಳು ಶೆಡ್‌ಗಳಲ್ಲಿ ಬರುತ್ತಿರುವುದರಿಂದ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಮಳೆ, ಗಾಳಿಗೆ ಶೆಡ್‌ಗಳು ಹಾರಿಹೋಗಿ ಸಾಕಷ್ಟು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ದಾಸ ಸಮುದಾಯಕ್ಕೆ ಆಧಾರ್ ಕಾರ್ಡ್, ವಾಸಸ್ಥಳ ಪ್ರಮಾಣಪತ್ರ ಮುಂತಾದವು ಇಲ್ಲದೇ ಇರುವುದರಿಂದ ಅವರ ಮಕ್ಕಳು ಸಹ ಶಾಲೆಗಳಿಗೆ ಪ್ರವೇಶ ಪಡೆಯಲು ಆಗುತ್ತಿಲ್ಲ. ಆಧಾರ, ಪಡಿತರ ಚೀಟಿ ಮತ್ತು ವಾಸಸ್ಥಳ ಪ್ರಮಾಣಪತ್ರ ಪಡೆಯಲು ವಿಳಾಸ ಮುಖ್ಯವಾಗಿದೆ. ಆದ್ದರಿಂದ ಸಮುದಾಯಕ್ಕೆ ಇರುವ ಜಮೀನಿನಲ್ಲಿಯೇ ಎರಡು ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರಿ ಸ್ವಾಮ್ಯದ ಸರ್ವೆ ನಂಬರ್ ೪೯ರಲ್ಲಿ ಒಟ್ಟು ೨೦ ಎಕರೆ ೩೮ ಗುಂಟೆ ಜಮೀನು ಇದ್ದು, ಸ್ಥಳೀಯರಾದ ಪ್ರಭಾಕರ್ ತಂದೆ ಶಂಕರೆಪ್ಪ ಅವರಿಗೆ ೩ ಎಕರೆ, ೯ ಎಕರೆ ಜಮೀನು ಸರ್ಕಾರಿ ಕಟ್ಟಡಗಳಿಗಾಗಿ, ಪೋಲಿಸ್ ಇಲಾಖೆಗೆ ೬ ಎಕರೆ ಜಮೀನು ಕಾಯ್ದಿರಿಸಲಾಗಿದೆ. ಉಳಿದ ಖಾಲಿ ಜಮೀನಿನಲ್ಲಿ ಅಲೆಮಾರಿ ಸಮುದಾಯದ ನಿವೇಶನ ಮಂಜೂರು ಮಾಡಲು ಹಲವಾರು ಸಲ ಮನವಿ ಸಲ್ಲಿಸಿದರು ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಎಂದು ಹೊಸ ನಾಮಕರಣ ಮಾಡಿದ್ದಾರೆ. ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೊಂದಣಿ ಮಾಡುವ ಕುರಿತು ಗಂಭೀರ ಚಿಂತನೆ ನಡೆದಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ನಿಜವಾಗಿಯೂ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಾಳಜಿ ಇದ್ದಲ್ಲಿ ಅಲೆಮಾರಿ ಜನಾಂಗದ ಕುರಿತು ಸಮೀಕ್ಷೆ ಕೈಗೊಂಡು ಅವರಿಗೆ ಬದುಕಲು ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ್ ಖನ್ನಾ, ಜಿಲ್ಲಾ ಖಜಾಂಚಿ ಸೂರ್ಯಕಾಂತ್ ಅಜಾದಪೂರ್, ಮಹೇಶ್ ಕೋಕಿಲೆ, ಶಿವುಕುಮಾರ್ ಕೊರಳ್ಳಿ ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

50 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago