ಕಲಬುರಗಿ: ನಗರದಲ್ಲಿ ಹಮ್ಮಿಕೊಂಡಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನೆರೆ ಹಾವಳಿ ನಿಮಿತ್ಯ ಮುಂದೂಡಬೇಕು ಎಂದು ಆಗ್ರಹಿಸಿ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ, ಸಕ್ಕರೆ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರಿಗೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ್ ಅವರು ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ನೂತನ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದಂತೆ ಹಿಂದಿನ ಸರ್ಕಾರ ನೇಮಿಸಿದ ಪ್ರಾತಿನಿಧಿಕ ಸಂಸ್ಥೆಗಳ ಅಧ್ಯಕ್ಷರನ್ನು ಅಧಿಕಾರದಿಂದ ಮುಕ್ತಗೊಳಿಸಿತ್ತು. ಇದು ನಿಯಮ. ಆದರೆ ಕನ್ನಡ ಸಾಹಿತ್ಯ ಪರಿಷ್ಯತ ರಾಜ್ಯ ಹಾಗೂ ಜಿಲ್ಲಾ ಸಮಿತಿಗಳ ಅಧ್ಯಕ್ಷರು ಚುನಾವಣೆಯಲ್ಲಿ ಆಯ್ಕೆಯಾಗಿ ಬಂದು ಮೂರು ವರ್ಷ ಸಮಯ ಮೀರಿದ್ದರೂ ಇನ್ನೂ ಅಧಿಕಾರದಲ್ಲಿ ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು
೧೦೦ ವರ್ಷಗಳ ಹಿಂದೆ ಕನ್ನಡ ದಿಗ್ಗಜರು ನಿರ್ಮಿಸಿ ಜೋಪಾನವಾಗಿ ಬೆಳೆಸಿಕೊಂಡು ಬಂದಿದ್ದ ಪರಿಷ್ಯತ ನಡಾವಳಿಯಲ್ಲಿದ್ದ ಮೂರು ವರ್ಷದ ಅಧಿಕಾರ ಅವಧಿಯನ್ನು ತಮ್ಮ ಅಧಿಕಾರ ಅವಧಿಯಿಂದಲೇ ಬದಲಾಯಿಸಿಕೊಂಡ ಮ.ನು. ಬಳಿಗಾರ್ ಅವರು ಪ್ರಜಾಪ್ರಭುತ್ವದ ವಿರೋಧಿ ನಡೆ ತೋರಿದ್ದು ಒಂದು ದೊಡ್ಡ ದುರಂತವೇ ನಡೆದು ಹೋಯಿತು. ಬೆಂಗಳೂರು ಕನ್ನಡ ಸಂಘರ್ಷ ಸಮಿತಿಯು ಪ್ರಭಲ ವಿರೋಧ ವ್ಯಕ್ತಪಡಿಸಿ ಹೋರಾಟಕ್ಕಿಳಿದಿದೆ. ಬೆಂಗಳೂರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಸಂಘ ಸಂಸ್ಥೆಗಳ ರಿಜಿಸ್ಟ್ರಾರ್ ಕಚೇರಿಯಲ್ಲಿ, ನ್ಯಾಯಲಯ ಹಾಗೂ ಹೈಕೋರ್ಟ್‌ನಲ್ಲಿ ದೂರು ಸಲ್ಲಿಸಿ ಈಗಲೂ ಹೊರಾಡುತ್ತಿದ್ದಾರೆ ಎಂದು ಅವರು ವಿವರಿಸಿದರು.
ಕನ್ನಡ ಸಾಹಿತ್ಯ ಪರಿಷತ್ ದುರುಪಯೋಗ ಆಗುತ್ತಿದ್ದರೂ ಸಹ ಸಾಹಿತಿಗಳು ಬಾಯಿ ಬಿಚ್ಚದಿರುವುದು ದುರಂತ. ಮೈಸೂರು ಅರಸರು, ಸರ್ ಎಂ. ವಿಶ್ವೇಶ್ವರಯ್ಯ ಮುಂತಾದವರು ಕಟ್ಟಿದ ಕನ್ನಡದ ಮಹಾನ್ ದಿಗ್ಗಜಯ ಕವಿಗಳು ಬೆಳೆಸಿಕೊಂಡು ಬಂದ ಕನ್ನಡಿಗರ ಜ್ಞಾನ ಮಂದಿರವಾದ ಕನ್ನಡ ಸಾಹಿತ್ಯ ಪರಿಷತ್ತು ರಾಜಕಾರಣಿಗಳ ನೆಲದಾಣವಾಗುತ್ತಿರುವುದು ಸುಳ್ಳಲ್ಲ. ಅದನ್ನು ಸರಿ ದಾರಿಗೆ ತರುವುದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದರು. ಫೆಬ್ರವರಿಯಲ್ಲಿ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುತ್ತಿರುವುದು ಸರಿಯಲ್ಲರಾಜ್ಯದಲ್ಲಿ ನೆರೆಹಾವಳಿಯಿಂದ ಸಂತ್ರಸ್ತರು ಇನ್ನೂ ಗಂಜಿ ಕೇಂದ್ರಗಳಲ್ಲಿ ಜೀವನ ಸಾಗಿಸುತ್ತಿದ್ದಾರೆ.
ಕಷ್ಟಕ್ಕೆ ನೆರವಾಗಬೇಕಾಗಿರುವುದು ಎಲ್ಲರ ಕರ್ತವ್ಯ. ಸಾಹಿತ್ಯ ಪರಿಷತ್ ಅಧ್ಯಕ್ರ ಅವಧಿ ವಿವಾದವೂ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ನಿಗದಿಪಡಿಸಿದ ಸಾಹಿತ್ಯ ಸಮ್ಮೇಳನ ಮುಂದೂಡಬೇಕು ಎಂದು ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ವಿನೋದಕುಮಾರ್ ಜನೆವರಿ, ಮಹೇಶ್ ಕೆ. ಪಾಟೀಲ್, ಮಂಜುನಾಥ್ ಅಂಕಲಗಿ, ತಾತಾಗೌಡ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು. ಕಲ್ಯಾಣ ಕರ್ನಾಟಕ ನಾಮಕರಣ ಮಾಡಿದ್ದಕ್ಕೆ ಸಚಿವ ಸಿ.ಟಿ. ರವಿ ಅವರನ್ನು ಸನ್ಮಾನಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…