ಕಲಬುರಗಿ: ವೃತ್ತಿಪರ ಕೋರ್ಸ್‌ಗಳಾದ ಎಂ.ಬಿ.ಬಿ.ಎಸ್., ಬಿ.ಇ. ಮತ್ತಿತರ ಕೋರ್ಸ್‌ಗಳಲ್ಲಿ 2018-19ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಧಾನಮಂತ್ರಿ ಶಿಷ್ಯವೇತನಕ್ಕಾಗಿ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸದಿರುವ ಹಾಗೂ ಅರ್ಜಿ ಸಲ್ಲಿಸಿ ಕೆಲವು ಕಾರಣಗಳಿಂದ ಅರ್ಜಿ ತಿರಸ್ಕೃತಗೊಂಡ ಮಾಜಿ ಸೈನಿಕರ ಮಕ್ಕಳಿಗೆ (ವಿದ್ಯಾರ್ಥಿಗಳಿಗೆ) ಮತ್ತೊಮ್ಮೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಶಿಷ್ಯವೇತನಕ್ಕಾಗಿ 2019ರ ಏಪ್ರಿಲ್ 24 ರಿಂದ ಮೇ 5 ರವರೆಗೆ www.ksb.gov.in ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾಜಿ ಸೈನಿಕರ ಮಕ್ಕಳು ಇದರ ಸದುಪಯೋಗ ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಬೆಂಗಳೂರಿನ ಡಿಸ್ಟ್ರಿಕ್ಟ್ 317ಎ ಲಯನ್ಸ್ ಸರ್ವೀಸ್ ಫೌಂಡೇಶನರವರು ಮೃತ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡುತ್ತಿದ್ದು, ಇದಕ್ಕಾಗಿ ಅರ್ಹ ಮೃತ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮೃತ ಮಾಜಿ ಸೈನಿಕರ ಪತ್ನಿಯು ಮಾಹೆಯಾನ 25, 000 ರೂ.ಕ್ಕಿಂತ ಕಡಿಮೆ ಕುಟುಂಬ ಪಿಂಚಣಿಯನ್ನು ಪಡೆಯುತ್ತಿರಬೇಕು. ಅರ್ಹ ಮೃತ ಮಾಜಿ ಸೈನಿಕರ ಪತ್ನಿ, ಮಕ್ಕಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ 2019ರ ಜೂನ್ 1ರ ರೊಳಗಾಗಿ ಬೆಂಗಳೂರಿನ ಡಿಸ್ಟ್ರಿಕ್ಟ್ 317ಎ ಲಯನ್ಸ್ ಸರ್ವೀಸ್ ಫೌಂಡೇಶನ್ ಇವರಿಗೆ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧದಲ್ಲಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-224003ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…