ಬಿಸಿ ಬಿಸಿ ಸುದ್ದಿ

21 ರಂದು ‘ಮಕ್ಕಳ ವಿಕಾಸ ವೈಭವ

ಕಲಬುರಗಿ: ಮಕ್ಕಳ ಕನಸಿನ ಲೋಕ ತೆರೆದಿಡುವ ಮತ್ತು ಅವರ ವಿವೇಕಕ್ಕೆ ಬೆಳಕು ನೀಡುವ ಉದ್ದೇಶದಿಂದ ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ಒಂದು ದಿನದ ‘ಮಕ್ಕಳ ವಿಕಾಸ ವೈಭವ-೨೦೧೯’ ಎನ್ನುವ ವಿಶೇಷ ಸಮ್ಮೇಳನವೊಂದನ್ನು ಹಿರಿಯ ನಾಟಕಕಾರ ಈಶ್ವರಪ್ಪ ಫರಹತಾಬಾದ ವೇದಿಕೆಯಡಿಯಲ್ಲಿ ನ.೨೧ ರಂದು ಬೆಳಗ್ಗೆ ೧೦.೧೫ ಕ್ಕೆ ನಗರದ ಶಹಾಬಜಾರದಲ್ಲಿನ ಪರುಷ ಮಠದ ಶ್ರೀ ಚನ್ನಮಲ್ಲೇಶ್ವರ ವಿದ್ಯಾವರ್ಧಕ ಸಂಘದ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಸಂಸ್ಥಾಪಕರೂ ಆದ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.

ಪ್ರತಿಯೊಂದು ಮಗುವಿನಲ್ಲಿ ಪ್ರತಿಭೆಯ ಸಾಗರವೇ ಅಡಗಿರುತ್ತದೆ. ಅದಕ್ಕೆ ಸೂಕ್ತ ಅವಕಾಶ ಮತ್ತು ಪುರಸ್ಕಾರ ದೊರೆತಾಗ ಆ ಪ್ರತಿಭೆ ಸುಂದರವಾಗಿ ಅರಳಲಿಕ್ಕೆ ಸಾಧ್ಯವಾಗುತ್ತದೆ. ಅಂಥ ಸೂಕ್ತ ಪ್ರತಿಭೆಗಳ ಅನಾವರಣಕ್ಕಾಗಿಯೇ ಮೀಸಲಾದ ಕಾರ್ಯಕ್ರಮ ಇದಾಗಿದ್ದು, ಮಕ್ಕಳಿಂದ ಕಲೆ, ಸಾಹಿತ್ಯ, ಸಾಂಸ್ಕೃತಿಕ ಮುಂತಾದ ಪ್ರತಿಭೆಗಳ ಪ್ರಕಾಶನವಾಗುತ್ತಲಿದೆ. ಆ ಒಲವಿನ ನಲಿವಿನ ಚೆಲುವಿನ ಮಕ್ಕಳ ವಿಕಾಸ ವೈಭವ ಜರುಗಲಿದೆ ಎಂದು ಅವರು ವಿವರಿಸಿದ್ದಾರೆ.

ಅಂದು ಬೆಳಗ್ಗೆ ೧೦.೧೫ ಕ್ಕೆ ಹಮ್ಮಿಕೊಂಡ ವೈಭವಕ್ಕೆ ಜಿಪಂನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜಾ ಪಿ. ಚಾಲನೆ ನೀಡಲಿದ್ದು, ಶ್ರೀ ಚನ್ನಮಲ್ಲೇಶ್ವರ ವಿದ್ಯಾವರ್ಧಕ ಸಂಘದ ಉಜಪಾಧ್ಯಕ್ಷ ಸಿದ್ರಾಮಪ್ಪ ಉಕಲಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ರ ಕಲಾವಿದ ಮೋಹನ ಸೀತನೂರ, ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ, ಮಹಿಳಾ ಸಂಘಟಕಿ ಭುವನೇಶ್ವರಿ ಹಳ್ಳಿಖೇಡ, ಸ್ವಾಗತ ಸಮಿತಿ ಅಧ್ಯಕ್ಷ ಡಾ.ಸುರೇಶ ಆರ್.ಸಜ್ಜನ್, ಕಾರ್ಯಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರತಿಷ್ಠಾನ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಬೆಳಗ್ಗೆ ೧೧.೪೫ ಕ್ಕೆ ನಡೆಯುವ ಇರುವಂತೆ ಎರೆಯುವೆ ಗೋಷ್ಠಿಯಲ್ಲಿ ಕಥೆ ನೈತಿಕತೆ ವಿಷಯದ ಕುರಿತು ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ, ಆರೋಗ್ಯಕ್ಕೆ ಆಪ್ತ ಸಲಹೆ ಕುರಿತು ವೈದ್ಯ ಸಾಹಿತಿ ಡಾ.ಎಸ್.ಎಸ್.ಪಾಟೀಲ ಮಂದರವಾದ ಮಾತನಾಡಲಿದ್ದು, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನದ ಬಸವರಾಜ ಕೋನೆಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ-ಸಾಹಿತಿ ಸಂಗಮನಾಥ ರೇವತಗಾಂವ, ಶ್ರೀ ಚನ್ನಮಲ್ಲೇಶ್ವರ ವಿದ್ಯಾವರ್ಧಕ ಸಂಘದ ಪರಮೇಶ್ವರ ಮುನ್ನೋಳ್ಳಿ, ಶ್ರೀಶೈಲ್ ಹೊದಲೂರ, ಶಿಕ್ಷಕ-ಸಾಹಿತಿ ನಾಗೇಂದ್ರಪ್ಪಾ ಮಾಡ್ಯಾಳೆ ಉಪಸ್ಥಿತರಿರುವರು.

ಮಧ್ಯಾಹ್ನ ೨.೧೫ ಕ್ಕೆ ಶ್ರೀ ಚನ್ನಮಲ್ಲೇಶ್ವರ ಪ್ರೌಢ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಶಾಂತಕುಮಾರ ಶಿರೂರ, ಪ್ರಭುಲಿಂಗ ಮೂಲಗೆ ಉಪಸ್ಥಿತರಿರುವರು. ಮಧ್ಯಾಹ್ನ ೩.೧೫ ಕ್ಕೆ ನಡೆಯುವ ಸಮಾರಂಭದಲ್ಲಿ ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ ಹರಸೂರ ಸಮಾರೋಪ ನುಡಿಗಳನ್ನಾಡಲಿದ್ದು, ಶ್ರೀ ಚನ್ನ ಮಲ್ಲೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಧೂಳಪ್ಪಾ ಹಾದಿಮನಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ವೀರಶೈವ ಸಮಾಜದ ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ ಆವಂಟಿ, ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಭರತರಾಜ ಸಾವಳಗಿ, ಸಂಗೀತ ಕಲಾವಿದೆ ಗಿರೀಜಾ ಕರ್ಪೂರ ಉಪಸ್ಥಿತರಿರುವರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago