22 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ

0
117

ಕಲಬುರಗಿ: ಇದೇ ನವೆಂಬರ್ 22 ರಂದು ಶುಕ್ರವಾರ ಮಧ್ಯಾಹ್ನ 1.30 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ.

ರಾಜ್ಯದ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಹಾಗೂ ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಮತ್ತು ಲೋಕೋಪಯೋಗಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್., ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಅವರ ಘನ ಉಪಸ್ಥಿತಿಯಲ್ಲಿ ಕಲಬುರಗಿ (ಗ್ರಾಮೀಣ) ವಿಧಾನಸಭಾ ಮತಕ್ಷೇತ್ರ ಶಾಸಕ ಬಸವರಾಜ ಮುತ್ತಿಮೂಡ ಅಧ್ಯಕ್ಷತೆ ವಹಿಸಲಿದ್ದಾರೆ.

Contact Your\'s Advertisement; 9902492681

ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ,  ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ವಿಧಾನಸಭಾ ಶಾಸಕರುಗಳಾದ ಪ್ರಿಯಾಂಕ್ ಖರ್ಗೆ, ಡಾ. ಅಜಯಸಿಂಗ್, ದತ್ತಾತ್ರೇಯ ಸಿ. ಪಾಟೀಲ ರೇವೂರ, ಎಮ್.ವಾಯ್. ಪಾಟೀಲ, ಸುಭಾಷ ಆರ್. ಗುತ್ತೇದಾರ, ರಾಜಕುಮಾರ ಪಾಟೀಲ ತೇಲ್ಕೂರ, ಕನೀಜ್ ಫಾತಿಮಾ, ಡಾ.ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ತಿಪ್ಪಣ್ಣ ಕಮಕನೂರ, ಕಲಬುರಗಿ ತಾಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ್ ಸಜ್ಜನ್, ಸರಡಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋಧ ಆರ್. ಪವಾರ್,    ಸರ್ಕಾರದ ಮುಖ್ಯ ಕಾರ್ಯದರ್ಶಿ ತ.ಮ. ವಿಜಯಭಾಸ್ಕರ್, ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ್‌ಸಿಂಗ್ ಕರೋಲಾ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧ್ಯಕ್ಷ ಅರವಿಂದ್ ಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here