ಬಿಸಿ ಬಿಸಿ ಸುದ್ದಿ

ಸಚಿವ ಮದುಸ್ವಾಮಿಯಿಂದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಗೆ ಏಕವಚನದಲ್ಲಿ ನಿಂದನೆ: ಕ್ಷಮೆಗೆ ಆಗ್ರಹ

ಮೈಸೂರು: ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಯವರನ್ನು ಕರ್ನಾಟಕ ಸರ್ಕಾರದ ಕಾನೂನು ಮತ್ತು ಸಂಸದೀಯ ವ್ಯವಹಾರ  ಸಚಿವರಾದ ಜೆ.ಸಿ.ಮಾಧುಸ್ವಾಮಿ ರವರು ಶಾಂತಿ ಸಭೆಯಲ್ಲಿ ಸ್ವಾಮಿಜಿಯವರನ್ನು ಏಕವಚನದಲ್ಲಿ ನಿಂದಿಸಿ ಉದ್ಧಟನದಿಂದ ಏರುಧ್ವನಿಯಲ್ಲಿ ಹಿಂದುಳಿದ ವರ್ಗಗಳ ಸಮುದಾಯದ ಸ್ವಾಮೀಜಿಯವರನ್ನು ಅವಮಾನಿಸಿರುವುದು ಖಂಡಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿ ಸಚಿವರಿಗೆ ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿರುವ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಕೆ.ಎಸ್.ಶಿವರಾಂ ಸಚಿವರಿಂದ ಸ್ವಾಮೀಜಿಯ ವಿರೋಧ ಅನಾಗರೀಕ ವರ್ತನೆಯಿಂದ ಹಿಂದುಳಿದ ಸಮುದಾಯಕ್ಕೆ ಧಕ್ಕೆಯಾಗಿದ್ದು ಸಚಿವ ಸಂಪುಟ ದರ್ಜೆಯ ಸಚಿವರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಈ ರೀತಿಯ ವರ್ತನೆ ಖಂಡನೀಯ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ತೀಡಿ ಆಡಳಿತ ನಡೆಸಬೇಕಾಗಿರುವಂತಹ ಸಚಿವರಾಗಿ ಶಾಂತಿ ಸಭೆಯಲ್ಲಿ ಒಬ್ಬ ಜವಾಬ್ದಾರಿಯುತ ಸ್ವಾಮೀಜಿಯವರನ್ನು ಏಕವಚನದಲ್ಲಿ ನಿಂದಿಸಿ ಟತನದಿಂದ ವರ್ತಿಸಿರುವುದು ಖಂಡನಾರ್ಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವರು ಸ್ವಾಮೀಜಿಯಲ್ಲಿ ಹಾಗೂ ಸಮುದಾಯದಕ್ಕೆ ಕ್ಷಮೆ ಕೇಳಬೇಕೆಂದು ತಪ್ಪಿದ್ದಲ್ಲಿ ಮುಖ್ಯಮಂತ್ರಿಗಳು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಸ್ವಾಮೀಜಿ ಮತ್ತು ಸಮುದಾಯದ ಆತ್ಮಗೌರವವನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದರು.

ನಂತರ ವೇದಿಕೆಯ ಜಿಲ್ಲಾಧ್ಯಕ್ಷ ಜಾಕೀರ್ ಹುಸೇನ್ ಮಾತನಾಡಿ, ಇವರನ್ನು ಸಂಪುಟದಿಂದ ಕೈಬಿಡದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುವುದು ಮತ್ತು ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧ ಮತ ಚಲಾಯಿಸುವುದರ ಮೂಲಕ ತಮ್ಮ ಆತ್ಮಾಭಿಮಾನವನ್ನು ಬಿಜೆಪಿ ಪಕ್ಷಕ್ಕೆ ತೋರಿಸಬೇಕೆಂದು ಜಿಲ್ಲಾಧಿಕಾರಿಗಳ ಆವರಣದಲ್ಲಿ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ನಡೆಸಿ ಆಹ್ರಹಿಸಿದರು.

ಒಕ್ಕೂಟದ ಸಂಚಾಲಕರಾದ, ರಾಜು, ಡೈರಿ ವೆಂಕಟೇಶ್ ಪಿ.ರಾಜು, ವೀರಮಡಿವಾಳ ಸಂಘದ ಸಂಚಾಲಕರಾದ ಸತ್ಯನಾರಾಯಣ್, ಜಿಲ್ಲಾ ಕುಂಬಾರ ಸಂಘದ ಗೌರವ ಅಧ್ಯಕ್ಷರಾದ ಮಾರಶೆಟ್ಟಿ,ಯುವಮುಖಂಡರಾದ ಲೋಕೇಶ್‌ಕುಮಾರ್, ಕಾಡನಹಳ್ಳಿ ಸ್ವಾಮಿಗೌಡ, ಪ್ರಸನ್ನಸೇರಿದಂತೆ ಇನ್ನಿತರ ಪ್ರಗತಿಪರ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago