ವಾಡಿ: ರಾಜ್ಯದಲ್ಲಿ ನೆರೆಹಾವಳಿ ಸಂಭವಿಸಿ ಜನರು ತೀವ್ರ ಸಂಕಷ್ಟದಲ್ಲಿರುವುದನ್ನು ಗಮನಿಸಿ ಈ ವರ್ಷ ನ.೨೨ ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ತಮ್ಮ ೪೧ನೇ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನೆ ಕೈಬಿಟ್ಟಿರುವ ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ವಾಡಿ ಬ್ಲಾಕ್ ಕಾಂಗ್ರೆಸ್ ಹಿರಿಯ ಮುಖಂಡ, ಕೇಂದ್ರ ಕಾರ್ಮಿಕ ಸಲಹಾ ಸಮಿತಿ ಮಾಜಿ ಸದಸ್ಯ ಭೀಮರಾವ ಧೊರೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿ ವರ್ಷ ಬೆಂಗಳೂರಿನ ಅವರ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಸಾವಿರಾರು ಜನ ಅಭಿಮಾನಿಗಳ ಒತ್ತಾಸೆಯ ಮೇರೆಗೆ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಜನ್ಮ ಸಂಭ್ರಮವನ್ನು ಕೈಬಿಟ್ಟು ಮೂರು ದಿನಗಳ ಕಾಲ ವಿಪಾಸನ ಧ್ಯಾನದಲ್ಲಿ ತೊಡಗಿಕೊಳ್ಳುತ್ತಿರುವುದಾಗಿ ಪ್ರಕಟಿಸಿರುವುದು ಆದರ್ಶದಾಯಕ ಬದಲಾವಣೆಯಾಗಿದೆ.
ರಾಜ್ಯದ ಯಾವ ಶಾಸಕನೂ ತರಲಾರದಷ್ಟು ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ತಂದು ಚಿತ್ತಾಪುರ ಕ್ಷೇತ್ರದ ಪ್ರಗತಿಗೆ ಶ್ರಮಿಸಿರುವ ಶಾಸಕ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನವನ್ನು ಸ್ಥಳೀಯಮಟ್ಟದಲ್ಲಿಯೇ ಶೋಷಿತರು, ನೊಂದವರು ಹಾಗೂ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಕಾರ್ಯರ್ತರು ಆದರ್ಶ ಮರೆಯಬೇಕು ಎಂದು ಕೋರಿದ್ದಾರೆ.