ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಿಂದ ೫೬ ಕಿ.ಮೀ. ವ್ಯಾಪ್ತಿಯೊಳಗಡೆಯ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳ (ಕಟ್ಟಡ ನಿರ್ಮಾಣ, ವಿನ್ಯಾಸ ಅಭಿವೃದ್ಧಿ ಇತರೆ) ನಿರ್ಮಾಣ ಕೈಗೊಳ್ಳುವ ಪೂರ್ವದಲ್ಲಿ ಸಾರ್ವಜನಿಕರು ಏರ್‌ಪೋರ್ಟ್ ಆಥಾರಿಟಿ ಆಫ್ ಇಂಡಿಯಾದಿಂದ ಹೈಟ್ ಕ್ಲಿಯರೆನ್ಸ್ (Height Clearance) ಪ್ರಮಾಣಪತ್ರವನ್ನು ಪಡೆಯಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಅವರು ತಿಳಿಸಿದ್ದಾರೆ.
ಭಾರತ ಸರ್ಕಾರದ ಅಧಿಸೂಚನೆ ಸಂಖ್ಯೆ GSR/751/9(E)/AAI ರಂತೆ ಏರ್‌ಪೋರ್ಟ್ ಆಥಾರಿಟಿ ಆಫ್ ಇಂಡಿಯಾದಿಂದ ಪ್ರಮಾಣಪತ್ರ ಪಡೆಯಬೇಕು. ವಿಮಾನ ನಿಲ್ದಾಣದ ಪರಿಸರದಲ್ಲಿ ಕಟ್ಟಡ ನಿರ್ಮಾಣ ಕೈಗೊಳ್ಳುವ ಪೂರ್ವದಲ್ಲಿ ಆಕ್ಷೇಪಣಾ ರಹಿತ ಪ್ರಮಾಣಪತ್ರ ಪಡೆಯಲು ಸಾರ್ವಜನಿಕರು ಎಎಐ https://nocas2.aai.aero/nocas ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.