ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ನೂತನವಾಗಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿರುವ ವಿಮಾನ ನಿಲ್ದಾಣಕ್ಕೆ ಹೆಸರನ್ನು ಶ್ರೀ ಶರಣ ಬಸವೇಶ್ವರ ಕಲ್ಯಾಣ ಕರ್ನಾಟಕ ಎಂದು ಹೆಸರಿಡಲು ಕಲಬುರಗಿ ವೀರಶೈವ ಸಮಾಜ ಅಧ್ಯಕ್ಷ ಅರುಣಕುಮಾರ ಎಸ್ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಶ್ರೀಶೈಲ ಘೂಳಿ ಅವರು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.