ಬಿಸಿ ಬಿಸಿ ಸುದ್ದಿ

ವಿಮಾನ ನಿಲ್ದಾಣ ಲೋಕಾರ್ಪಣೆ: ದೇಶ ವಿದೇಶದಿಂದ ಉದ್ಯಮಿಗಳು ಇಲ್ಲಿ ಹಣ ಹೂಡಿಕೆ ಮಾಡಲಿದ್ದಾರೆ: ಯಡಿಯೂರಪ್ಪ

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಕಲಬುರಗಿ ವಿನಾನ ನಿಲ್ದಾಣ ಹೊಸ ಅಯಾಮ ನೀಡಲಿದೆ. ರಾಜ್ಯದ ಈಶಾನ್ಯ ಭಾಗಕ್ಕೆ ವಿಮಾನಯಾನ ಸಂಪರ್ಕ ಹೊಂದಿರುವುದರಿಂದ, ದೇಶ ವಿದೇಶದಿಂದ ಉದ್ಯಮಿಗಳು ಇಲ್ಲಿ ಹಣ ಹೂಡಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.

2008 ರಲ್ಲಿ ನನ್ನಿಂದಲೆ ಅಡಿಗಲ್ಲು ಹಾಕಿದ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆ ಮಾಡುತ್ತಿದ್ದು, ಯಾವುದೋ ಜನ್ಮದ ಪುಣ್ಯದ ಫಲ ಎಂದು ಭಾವಿಸುತ್ತೇನೆ ಎಂದು ಹರ್ಷವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕದ ಘೋಷಣೆ ನಂತರ ಇಂದು ಸಿಮೆಂಟ್ ನಗರಿಯಲ್ಲಿ ವಿಮಾನ ನಿಲ್ದಾಣ ಸೇವೆ ಲಭ್ಯವಾಗುತ್ತಿದ್ದು, ಇಲ್ಲಿನ ಜನರ ಹರ್ಷಕ್ಕೆ ಪಾರವೆ ಇಲ್ಲದಂತಾಗಿದೆ. ಈ ಭಾಗಕ್ಕೆ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಿ ಕಲ್ಬುರ್ಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಸಮಗ್ರ ಅಭಿವೃದ್ದಿಗೊಳಿಸಿ ಕಲ್ಯಾಣ ಪದದ ನಿಜ ಅರ್ಥದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂಬ ಭರವಸೆಯನ್ನು ನೀಡಿದರು.

3.175 ಕಿ.ಮಿ. ಉದ್ದದ ರನ್ವೆ ಹೊಂದಿರುವ ಕಲಬುರಗಿ ವಿಮಾನ ನಿಲ್ದಾಣ ರಾಜ್ಯದ 2ನೇ ಹಾಗೂ ದೇಶದ 10ನೇ ಅತಿ ಉದ್ದದ ರನ್ವೆ ಇದಾಗಿದೆ. ದೇಶಕ್ಕೆ ಶೇ.30 ರಷ್ಟು ತೊಗರಿ ಉತ್ಪಾದಿಸುವ ಮತ್ತು ಸಿಮೆಂಟ್ ರಫ್ತಿನಿಂದ ಕಲಬುರ್ಗಿ ಜಿಲ್ಲೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಹೀಗಾಗಿ ಇಲ್ಲಿನ ವಿಮಾನ ನಿಲ್ದಾಣವನ್ನು ಭವಿಷ್ಯದಲ್ಲಿ  ಸರಕು ಸಾಗಣೆಗೂ ಬಳಸಿಕೊಳ್ಳುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಕಲಬುರಗಿ ಜನರ ಪ್ರೀತಿ ನನ್ನ ಮೇಲೆ ತುಸು ಹೆಚ್ಚಿದೆ. ನಿಮ್ಮ ಪ್ರೀತಿಗೆ ಚಿರರುಣಿಯಾಗಿದ್ದು, ನೀವಿಟ್ಟ ಭರವಸೆಗೆ ಯಾವುದೇ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುವೆ ಎಂದು ತಿಳಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago