ಆಳಂದ: 2008ರಲ್ಲಿ ತಾವೇ ಶಂಕುಸ್ಥಾಪನೆ ಮಾಡಿದ್ದ ಕಲಬುರಗಿ ವಿಮಾನ ನಿಲ್ದಾಣವನ್ನು ಅವರೇ ಉದ್ಘಾಟಿಸಿರುವುದು ಬಹಳ ಸಂತೋಷ ತಂದಿದೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿಯೇ ಆದ್ಯತೆಯಾಗಿದೆ ಎಂದು ಆಳಂದ ಕ್ಷೇತ್ರದ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಪರ್ವದಲ್ಲಿ ಇದೊಂದು ಮೈಲಿಗಲ್ಲಾಗಿದೆ. ವಿಮಾನ ನಿಲ್ದಾಣ ಆರಂಭದಿಂದ ಈ ಭಾಗದ ಜನರ ಅನೇಕ ದಶಕಗಳ ಹೋರಾಟಕ್ಕೆ ನ್ಯಾಯ ಸಿಕ್ಕಂತಾಗಿದೆ. ಇನ್ಮುಂದೆ ಅಪಾರ ಪ್ರಮಾಣದ ಬಂಡವಾಳ ಹೂಡಿಕೆ ಹರಿದು ಬರುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಪ್ರಾದೇಶಿಕ ಅಸಮಾನತೆ ನಿವಾರಣೆ ನಿಟ್ಟಿನಲ್ಲಿ ಇದೊಂದು ಮೈಲಿಗಲ್ಲು ಎಂದು ಬಣ್ಣಿಸಿದರು.