ಕಲಬುರಗಿ: ಇತ್ತೀಚಿಗಷ್ಟೆ ಉದ್ಘಾಟನೆಗೊಂಡಿರುವ ಕಲಬುರಗಿ ವಿಮಾನ ನಿಲ್ದಾಣದ ಆವರಣದಲ್ಲಿದ್ದ ಸಂತ ಸೇವಾಲಾಲ ಮತ್ತು ಮರಿಯಮ್ಮದೇವಿ ದೇವಾಲಯಗಳನ್ನು ತೆರವುಗೊಳಿಸಿ, ಮೂರ್ತಿಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಎಐಬಿಎಸ್‌ಎಸ್ ರಾಜ್ಯಾಧ್ಯಕ್ಷ ಸುಭಾಷ ರಾಠೋಡ ಇಲ್ಲಿನ ವಿವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.
ಇಂದು ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಮಾನ ನಿಲ್ದಾಣ ಕಾಮಗಾರಿಕೆ ಸಮಯದಲ್ಲಿ ಮೂರ್ತಿಗಳನ್ನು ಧ್ವಂಸಗೈಯಲಾಗಿದ್ದು, ಇದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇಂತಹ ಕೃತ್ಯ ವೆಸಗಿದ ತಪ್ಪಿತಸ್ಥ ಅಧಿಕಾರಿಗಳು ಮತ್ತಿತರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿ ಮೊದಲಿದ್ದ ಸ್ಥಳದಲ್ಲೇ ದೇವಾಲಯ ಮರು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ನಿಲ್ದಾಣ ನಿರ್ಮಾಣಕ್ಕೆ ಶೇ 90 ರಷ್ಟು ಜಮೀನು ನೀಡಿದ ಮದಿಹಾಳಮೋಕಿ ತಾಂಡಾಗಳ ಜನರ ಬೇಡಿಕೆಯಂತೆ ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ ಅವರ ಹೆಸರು ಇಡಬೇಕು. ಪುನರ್ ವಸತಿ ಕೇಂದ್ರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ ಜಮೀನು ನೀಡಿದ ರೈತರ ಕುಟುಂಬಗಳಿಗೆ ಉದ್ಯೋಗ ನೀಡಬೇಕು ಎಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಗೊಲ್ಲೂರವಾಡಿ ಸೇವಾಲಾಲ ಪುಣ್ಯಾಶ್ರಮದ ಬಳಿರಾಮ ಮಹಾರಾಜ, ಸಂತೋಷ ಆಡೆ, ಅರವಿಂದ ಚವ್ಹಾಣ, , ರಾಜು ಜಾಧವ, ಜಗನ್ನಾಥ ಮಾಸ್ಟರ್ ಸೇರಿದಂತೆ ಹಲವರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…