ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಕಾರ್ಯಾಚರಣೆ ಕೈಗೊಳ್ಳುವ ಪೂರ್ವ ಡಿಜಿಸಿಎ ನಿರ್ದೇಶನದಂತೆ ಸುರಕ್ಷತಾ ದೃಷ್ಠಿಯಿಂದ ರನ್ ವೇಗೆ ತುಂಬಾ ಹತ್ತಿರದಲ್ಲಿದ್ದ ಧಾರ್ಮಿಕ ದೇವಸ್ಥಾನವನ್ನು ಸುರಕ್ಷತಾ ದೃಷ್ಟಿಯಿಂದ ತೆರವುಗೊಳಿಸಿ ಧಾರ್ಮಿಕ ವಿಧಿ-ವಿಧಾನದಂತೆ ವಿಗ್ರಹವನ್ನು ಜಲಕ್ಕೆ ಸಮರ್ಪಿಸಲಾಗಿದೆ ಎಂದು ವಿಮಾನ ನಿಲ್ದಾಣಗಳ ಪ್ರಾಧಿಕಾರ ( ಎಎಐ) ಸ್ಪಷ್ಟಪಡಿಸಿದೆ.
ಕಲಬುರಗಿ ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸಿದ ನಂತರ ವಾಣಿಜ್ಯ ಕಾರ್ಯಾಚರಣೆ ಮತ್ತು ನಿರ್ವಹಣೆಗೆ 742 ಎಕರೆ ಸ್ಥಿರಾಸ್ತಿಯೊಂದಿಗೆ ಸಂಪೂರ್ಣ ಪ್ರದೇಶದ ಮಾಲೀಕತ್ವವನ್ನು ಅಧಿಕೃತವಾಗಿ ತಮಗೆ ಈಗಾಗಲೇ ಹಸ್ತಾಂತರಿಸಲಾಗಿದ್ದು, ಸದರಿ ಪ್ರದೇಶದ ಮಾಲೀಕತ್ವವು ಈಗ ನಮ್ಮದ್ದಾಗಿರುತ್ತದೆ ಎಂದು ಎಎಐ ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ನಿಲ್ದಾಣ ಪ್ರದೇಶ ತಮ್ಮ ವಶಕ್ಕೆ ಪಡೆದ ನಂತರ ವಾಣಿಜ್ಯ ವಿಮಾನ ಸಂಚಾರಕ್ಕೆ ಡಿಜಿಸಿಎ ಅವರಿಗೆ ಅನುಮತಿ ಕೋರಿದ ಮೇಲೆ ವಿಮಾನ ನಿಲ್ದಾಣ ಪರಿಶೀಲನೆಗೆ ಬಂದ ಡಿಜಿಸಿಎ ತಂಡ ರನ್ ವೇ ಬಳಿ ಇರುವ ಧಾರ್ಮಿಕ ದೇವಸ್ಥಾನವನ್ನು ಸುರಕ್ಷತಾ ದೃಷ್ಢಿಯಿಂದ ತೆರವುಗೊಳಿಸಲು ತಿಳಿಸಿದ್ದರಿಂದ ತೆರವಿಗೆ ಕ್ರಮಕೈಗೊಳ್ಳಲಾಯಿತು ಎಂದು ಹೇಳಿದರು.
ಕಲಬುರಗಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಈ ಹಿಂದೆ ಭೂಸ್ವಾಧೀನ ಪ್ರಕ್ರಿಯೆ ಕೈಗೊಂಡ ಸಂದರ್ಭದಲ್ಲಿ ಭೂಮಿ ಕಳೆದುಕೊಂಡ ಗ್ರಾಮಸ್ಥರಿಗೆ ಸರ್ಕಾರದಿಂದ ನೂತನ ಗ್ರಾಮದಲ್ಲಿ ಪುನರ್ ವಸತಿ ಕಲ್ಪಿಸಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳು ಹಾಗೂ ಧಾರ್ಮಿಕ ಕಾರ್ಯಗಳಿಗಾಗಿ ಪ್ರತ್ಯೇಕ ದೇವಸ್ಥಾನವನ್ನು ಸಹ ನಿರ್ಮಿಸಲಾಗಿರುತ್ತದೆ.
ಆ ಸಂದರ್ಭದಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಪ್ರದೇಶದಲ್ಲಿದ್ದ ಹಳೇ ದೇವಸ್ಥಾನದಲ್ಲಿನ ವಿಗ್ರಹವನ್ನು ಪುನರ್ ವಸತಿ ಕಲ್ಪಿಸಿರುವ ನೂತನ ದೇವಾಸ್ಥಾನಕ್ಕೆ ಸ್ಥಳಾಂತರಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಾಗ, ಗ್ರಾಮಸ್ಥರು ಹೊಸದಾಗಿ ನಿರ್ಮಾಣವಾಗಿದ್ದ ದೇವಸ್ಥಾನದಲ್ಲಿ ಹಳೆಯ ವಿಗ್ರಹವನ್ನು ಸ್ಥಾಪಿಸಲು ಬರುವುದಿಲ್ಲ. ಆದ್ದರಿಂದ ನೀವು ಇದ್ದ ವಿಗ್ರಹವನ್ನು ತೆಗೆದು ವಿಧಿವತ್ತಾಗಿ ವಿಸರ್ಜನೆ ಮಾಡಲು ನಮ್ಮ ಅಭ್ಯಂತರವಿಲ್ಲ ಎಂಬುದಾಗಿ ತಿಳಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ವಾಣಿಜ್ಯ ಸಂಚಾರ ಅರಂಭದ ಮುನ್ನ ಡಿಜಿಸಿಎ ನಿರ್ದೇಶನದಂತೆ ದೇವಸ್ಥಾನ ತೆರವುಗೊಳಿಸಲಾಗಿದೆ ಎಂದು ಸ್ಪಷ್ಟ ನೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…