ಕಲಬುರಗಿ: ಹಿರಿಯ ಬಂಡಾಯ ಸಾಹಿತಿ ಡಾ. ಚೆನ್ನಣ್ಣ ವಾಲೀಕಾರ ಅವರು ಕಳೆದ ಗುರುವಾರ ರಾತ್ರಿಯಿಂದ ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಅವರನ್ನು ನಗರದ ಸತ್ಯ ಯುರೋ ಕೇರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
76 ವರ್ಷ ವಯಸ್ಸಿನ ಅವರು ಕಳೆದ 9 ತಿಂಗಳಿಂದ ಕಾಮಾಲೆ ಮತ್ತು ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಡಿನ ಹಿರಿಯ ಸಾಹಿತಿ ಡಾ. ವಾಲೀಕಾರ ಅವರ ಚೇತರಿಕೆ ಯಾಗಲಿ. ಅವರ ಸಾಹಿತ್ಯ ಸೇವೆಯನ್ನು ಯಾರೂ ಮರೆಯಲಾಗದು ಎಂದು ಬಣ್ಣಸಿ, ಆಸ್ಪತ್ರೆಯ ವೈದ್ಯಾಧಿಕಾರಿ ಜೊತೆ ಮಾತನಾಡಿ ಅವರಿಗೆ ಸರಿಯಾದ ಟ್ರೀಟ್ಮೆಂಟ್ ಕೊಡಿ, ಅಗತ್ಯವೆನಿಸಿದರೆ ಹೈದ್ರಾಬಾದ್, ಬೆಂಗಳೂರು ಆಸ್ಪತ್ರೆಗೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಇ-ಮೀಡಿಯಾ ಲೈನ್ ಗೆ ತಿಳಿಸಿದರು.
ಅವರ ಶಾಸಕರು, ಶಿಷ್ಯರು, ಸಾಹಿತ್ಯಾಭಿಮಾನಿಗಳು, ಗೆಳೆಯರು ನಿನ್ನೆಯಿಂದ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ಇಂದು ಬೆಳಗ್ಗೆ ಸಾಹಿತಿ ನಾಡೋಜ ಡಾ. ಗೀತಾ ನಾಗಭೂಷಣ, ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಸಾಹಿತಿ ಶಿವರಂಜನ್ ಸತ್ಯಂಪೇಟೆ ಇತರರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…