ಬಿಸಿ ಬಿಸಿ ಸುದ್ದಿ

ಸರಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ SFI ಮನವಿ

ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಮಹಿಳಾ ಕಾಲೇಜಿ ಜಿಲ್ಲೆಯ ಹಳೆಯದಾದ ಮತ್ತು ಹೆಸರುವಾಸಿಯಾದ ಪ್ರಸಿದ್ಧ ಕಾಲೇಜಾಗಿದೆ ಇಲ್ಲಿ ನಗರ ಸೇರಿದಂತೆ ಗ್ರಾಮೀಣ ಅನೇಕ ವಿದ್ಯಾರ್ಥಿನಿಯರು ಅಭ್ಯಾಸದ ಮಾಡುತ್ತಿದ್ದಾರೆ. ಆದರೆ ಈ ಕಾಲೇಜು ಹಲವಾರು ಮೂಲಭೂತ ಸಮಸ್ಯೆಗಳಿಂದ ವಂಚಿತ ವಾಗಿದೆ ಎಂದು SFI ಜಿಲ್ಲಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಅವರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ತಿಳಿಸಿದರು.

ಇಲ್ಲಿ ಸರಿಯಾದ ಶೌಚಾಲಯ, ಕುಡಿಯುವ ನೀರು,ತರಗತಿಗಳ ಕೊಠಡಿ, ವಿದ್ಯುತ್ ಸಂಪರ್ಕ, ಸುಸಜ್ಜಿತ ಗ್ರಂಥಾಲಯ, ಲ್ಯಾಬ್, ಕಾಂಪೌಂಡ್ ಸೇರಿದಂತೆ ಅನೇಕ ಮೂಲಸೌಕರ್ಯಗಳಿಲ್ಲದೇ ಕಾಲೇಜು ನರಳುತ್ತಿದೆ. ಇದರಿಂದಾಗಿ ಈ ಕಾಲೇಜಿನಲ್ಲಿ 1500 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಭ್ಯಾಸ ವನ್ನು ಮಾಡುತ್ತಿರುವ ವಿದ್ಯಾರ್ಥಿನಿಯರ ಭವಿಷ್ಯಕ್ಕೆ ಬಲವಾದ ಪೆಟ್ಟು ಬೀಳುತ್ತದೆ. ಇಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳಿಲ್ಲ, ಒಟ್ಟು ಸಾವಿರ ವಿದ್ಯಾರ್ಥಿಗಳಿಗೆ ಇಲ್ಲಿ 2-3 ಶೌಚಾಲಯ ಗಳು ಮಾತ್ರ ಇದ್ದಾವೆ.

ಅಗತ್ಯವಾಗಿ ಈ ಕಾಲೇಜಿಗೆ 20 ಶೌಚಾಲಯಗಳನ್ನು ಶೀಘ್ರದಲ್ಲೇ ನಿರ್ಮಿಸಬೇಕು ಹಾಗೂ ಈಗ ನಿರ್ಮಾಣದ ಹಂತದಲ್ಲಿ ಇರುವ ಶೌಚಾಲಯದ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಬೇಕು. ಹಾಗೂ ಇತರ ಕಳಪೆ ಕೆಲಸ ಮಾಡಿ ಹಣ ದುರ್ಬಳಕೆ ಮಾಡಿಕೊಂಡ ಗುತ್ತಿಗೆದಾರರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮತ್ತು ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಬೇಕೆಂದು ಹಾಗೂ ಕಾಲೇಜಿಗೆ ಆಗತ್ಯ ಇರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಈ ಮೂಲಕ ಭಾರತ ವಿದ್ಯಾರ್ಥಿ ಫೆಡರೇಷನ್‌ SFI ರಾಯಚೂರು ಜಿಲ್ಲಾ ಸಮಿತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿಯಾದ ದುರ್ಗೇಶ್ ರವರಿಗೆ ಮನವಿ ಸಲ್ಲಿಸಲಾಯಿತು. ನಿರ್ಲಕ್ಷ್ಯ ವಹಿಸಿದರೆ ಉಗ್ರ ಹೋರಾಟದ ಎಚ್ಚರಿಕೆ ಯನ್ನು ನೀಡಲಾಗಿದೆ.

ಈ ಸಂಧರ್ಭದಲ್ಲಿ SFI ಜಿಲ್ಲಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ಜಿಲ್ಲಾ ಕಾರ್ಯದರ್ಶಿ ರಮೇಶ ವೀರಾಪುರ, ಉಪಾಧ್ಯಕ್ಷರಾದ ಲಿಂಗರಾಜ ಕಂದಗಲ್, ಮುಖಂಡರಾದ ದೀಲ್ ಶಾದ್, ಬಸವರಾಜ ದೀನಸಮುದ್ರ, ಚಿದಾನಂದ ಕರಿಗೂಳಿ ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago