ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ : ಅರ್ಜಿ ಆಹ್ವಾನ

0
122

ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ೨೦೧೯-೨೦ನೇ ಸಾಲಿಗೆ ವಿಶೇಷ ಘಟಕ ಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಂದ ೧೦ ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷೇತ್ರ ಪ್ರಚಾರ ಕಾರ್ಯಕ್ರಮ ಮತ್ತು ಮಾಧ್ಯಮ ಚಟುವಟಿಕೆಗಳ ಕುರಿತು ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ನೀಡುವ ಕಾರ್ಯಕ್ರಮ ಇದಾಗಿದೆ. ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ, ಕನ್ನಡ ಭಾಷೆಯಲ್ಲಿ ಪ್ರಬುದ್ಧತೆ ಇರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳ ವಯೋಮಿತಿ ೪೦ ವರ್ಷ ಮೀರಿರಬಾರದು. ಕರ್ನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಪ್ರತಿ ಅಭ್ಯರ್ಥಿಗೆ ಮಾಹೆಗೆ ೧೫,೦೦೦ ರೂ.ಗಳ ಸಂಭಾವನೆಯನ್ನು ನೀಡಲಾಗುತ್ತದೆ.

Contact Your\'s Advertisement; 9902492681

ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಿನಿ ವಿಧಾನಸೌಧದ ಜಿಲ್ಲಾಧಿಕಾರಿಗಳ ಕಚೇರಿ ಆವರಣ (ಲೋಕಸಭಾ ಸದಸ್ಯರ ಕಚೇರಿ ಹತ್ತಿರ) ದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಅಗತ್ಯ ಶೈಕ್ಷಣಿಕ ದಾಖಲಾತಿಗಳೊಂದಿಗೆ ಜಾತಿ ಪ್ರಮಾಣಪತ್ರವನ್ನು ಲಗತ್ತಿಸಿ ಅರ್ಜಿಯ ಲಕೋಟಿಯ ಮೇಲೆ ’ ವಿಶೇಷ ಘಟಕ ಯೋಜನೆಯಡಿ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಿ ಅರ್ಜಿಯನ್ನು ಸದರಿ ಕಚೇರಿಯಲ್ಲಿ ೨೦೧೯ರ ಡಿಸೆಂಬರ್ ೧೦ರೊಳಗಾಗಿ ಸಲ್ಲಿಸಬೇಕು. ತದನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-223133ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here