ಕಲಬುರಗಿ: ಉದನೂರಿನ ಅಪ್ಪಾಜಿ ಶಿಕ್ಷಣ ಟ್ರಸ್ಟ್ ಸಂಚಾಲಿತ ಅಪ್ಪಾಜಿ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಟ್ರಸ್ಟ್‌ನ ದಶಮಾನೋತ್ಸವ ಅಂಗವಾಗಿ 6ನೇ ತರಗತಿಯಿಂದ 10ನೇ ತರಗತಿಯ 50 ಮಕ್ಕಳಿಗೆ ಉಚಿತ ಪ್ರವೇಶ ನೀಡಲು ನಿರ್ಧರಿಸಿದ್ದು, ಈ ಸುವರ್ಣ ಅವಕಾಶವನ್ನು ವಿದ್ಯಾರ್ಥಿಗಳು ಹಾಗೂ ಪಾಲಕರು ಪಡೆದುಕೊಳ್ಳಬೇಕು ಎಂದು ಅಪ್ಪಾಜಿ ಶಿಕ್ಷಣ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷೆ ಭಾಗಮ್ಮ ರಾಜಕುಮಾರ ಉದನೂರು, ಕಾರ್ಯದಶಿಂ ರಾಜಕುಮಾರ ಬಿ.ಉದನೂರ ತಿಳಿಸಿದ್ದಾರೆ.
ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯಲು ನರ್ಸರಿಯಿಂದ ೧೦ನೇ ತರಗತಿ ವರೆಗೆ ಆಂಗ್ಲ ಮಾಧ್ಯಮ ಶಾಲೆಯನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿರುವ ಅಪ್ಪಾಜಿ ಗುರುಕುಲ ಆಂಗ್ಲಮಾಧ್ಯಮ ಶಾಲೆಯು 10ನೇ ವರ್ಷದಲ್ಲಿ ಪಾದಾರ್ಪಣೆ ಮಾಡಿದೆ.
ಗುರುಕುಲ ಮಾದರಿಯಲ್ಲಿ ನೈತಿಕ ಶಿಕ್ಷಣಕ್ಕೆ ಒತ್ತು ನೀಡಿ, ಮಕ್ಕಳಲ್ಲಿ ಶಿಸ್ತು ಮತ್ತು ಆತ್ಮಬಲ ಹೆಚ್ಚಿಸುವ ದಿಸೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುವುದು, ಪ್ರತಿ ಮಗುವಿನ ವೈಯಕ್ತಿಕ ಗಮನ ನೀಡಲು ಅನುಕೂಲವಾಗಲಿ ಎಂಬ ಕಾರಣದಿಂದ ಪ್ರತಿ ತರಗತಿಗೆ ಸೀಮಿತ ಸಂಖ್ಯೆಯಲ್ಲಿ ದಾಖಲಿಸಿಕೊಳ್ಳುವುದು, ಮಕ್ಕಳ ಮನೋವಿಕಾಸಕ್ಕಾಗಿ ಸಾಂಸ್ಕೃತಿಕ, ಸಾಹಿತ್ಯಕ, ಚಟುವಟಿಕೆಗಳನ್ನು ಪ್ರಾಥಮಿಕ ಹಂತದಲ್ಲಿಯೇ ಮಾಡುವುದು. ಕ್ರೀಡಾ ಮನೋಭಾವದ ಬೆಳವಣಿಗೆಗೆ ಒತ್ತು ನೀಡುವುದು ಸಂಸ್ಥೆಯ ಗುರಿಯಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳ ಅರಿವು, ಕಂಪ್ಯೂಟರ್ ಬಳಕೆ, ಚರ್ಚೆ, ಸಂವಾದ, ಚಿತ್ರ ಕಲೆ, ಸಂಗೀತಾಸಕ್ತಿಯನ್ನು ಮಕ್ಕಳಲ್ಲಿ ಬೆಳೆಸುವುದು ಪ್ರಮುಖ ಉzಶವಿದ್ದು, ಇದರಿಂದ ಮಕ್ಕಳ ಭವಿಷ್ಯಕ್ಕೆ ಉತ್ತಮ ತಳಹದಿ ನಿರ್ಮಾಣ ಮಾಡಿದಂತೆ ಆಗುತ್ತದೆ. ವಿದ್ಯಾರ್ಜನೆಗೆ ಮುಖ್ಯವಾಗಿ ಬೇಕಾಗಿರುವ ಉತ್ತಮ ವಾತಾವರಣ ಲಭ್ಯವಿದೆ. ಶುದ್ಧ ಕುಡಿಯುವ ನೀರಿನ ಘಟಕವಿದೆ. ಆಟದ ಮೈದಾನ, ಕಾಲಕಾಲಕ್ಕೆ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ, ಮಕ್ಕಳ ಪ್ರಗತಿ ಪರಿಶೀಲನೆಗೆ ಪಾಲಕರೊಂದಿಗೆ ಸಮಾಲೋಚನೆ ಕೈಗೊಳ್ಳುವುದು ಸಂಸ್ಥೆಯ ಧ್ಯೇಯವಾಗಿದೆ ಎಂದು ಹೇಳಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…