ಕಲಬುರಗಿ: ರಸ್ತೆ ಬದಿಗೆ ನಿಂತಿದ್ದಾಗ ಲಾರಿ ಡಿಕ್ಕಿ ಹೊಡೆದು ಬಾಲಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಕಲಬುರಗಿ-ಜೇವರ್ಗಿ ರಸ್ತೆಯ ಫರತಾಬಾದ ಬಸ್ ನಿಲ್ದಾಣದ ಎದರುಗಡೆ ನಡೆದಿದೆ.
ತೆಲಂಗಾಣ ರಾಜ್ಯದ ಕಾಮರೆಡ್ಡಿ ಜಿಲ್ಲೆಯ ವಿಠಲವಾಡಿ ಗ್ರಾಮದ ಅರವಿಂದ ಲಕ್ಷ್ಮಣ ರಾಠೋಡ್ (8) ಮೃತಪಟ್ಟ ಬಾಲಕ. ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಬಾಲಕ ಅರವಿಂದನ ಪಾಲಕರು ಕಬ್ಬು ಕಡಿಯುವ ಕೆಲಸಕ್ಕೆಂದು ತೆಲಂಗಾಣ ರಾಜ್ಯದಿಂದ ಇಲ್ಲಿಗೆ ಬಂದಿದ್ದು,ಕೆಲಸಕ್ಕೆಂದು ಯಡ್ರಾಮಿಗೆ ಹೊರಡಬೇಕಾಗಿದ್ದ ವೇಳೆ ಅವರನ್ನು ಕರೆದುಕೊಂಡು ಹೋಗಬೇಕಿದ್ದ ವಾಹನ ಕೆಟ್ಟಿದ್ದರಿಂದ ಬೇರೆ ವಾಹನಕ್ಕಾಗಿ ಕಾಯುತ್ತ ರಸ್ತೆ ಬದಿಗೆ ನಿಂತಿದ್ದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದು ಬಾಲಕ ಅರವಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮಗುವನ್ನು ಕಳೆದುಕೊಂಡ ಪಾಲಕರ ಆಕ್ರಂದನ ರಸ್ತೆಯಲ್ಲಿ ಮುಗಿಲು ಮುಟ್ಟಿತ್ತು. ಸುದ್ದಿ ತಿಳಿದು ಸಂಚಾರಿ ಪೊಲೀಸ್ ಠಾಣೆಯ ಪಿಐ ರಮೇಶ ಕಾಂಬಳೆ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…