ಕಾರಾಗೃಹದಲ್ಲಿ ಹೊಸ ಬ್ಯಾರಾಕುಗಳನ್ನು ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಿ

0
37

ಕಲಬುರಗಿ: ಕಲಬುರಗಿ ಕಾರಾಗೃಹದ ಬಂದಿಗಳ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಬ್ಯಾರಾಕುಗಳನ್ನು ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಅವರು ತಿಳಿಸಿದ್ದಾರೆ.

ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಸಂದರ್ಶಕ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರಾಗೃಹದ ಬಂದಿಗಳಿಗೆ ನಿರಂತರವಾಗಿ ವಿವಿಧ ವೃತ್ತಿಪರ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲು ಕೈಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು ಬಂದಿಗಳಿಗೆ ನಿರಂತರವಾಗಿ ವಿವಿಧ ವೃತ್ತಿಪರ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲು ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಕಾರಾಗೃಹದ ಅಭಿವೃದ್ದಿ ದೃಷ್ಟಿಯಿಂದ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕೆಂದರು.

Contact Your\'s Advertisement; 9902492681

ಸಭೆಯಲ್ಲಿ ಕಲಬುರಗಿ ನಗರದ ಪೊಲೀಸ್ ಆಯುಕ್ತರಾದ ಎಮ್.ಎನ್. ನಾಗರಾಜ್ ಮಾತನಾಡಿ, ಬಂದಿಗಳನ್ನು ನ್ಯಾಯಾಲಯಕ್ಕೆ ಹಾಗೂ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಹಾಜರುಪಡಿಸುವ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಬೆಂಗಾವಲು ನೀಡುವುದಾಗಿ ತಿಳಿಸಿದರು. ಕಾರಾಗೃಹದ ಮುಖ್ಯ ಅಧೀಕ್ಷಕರಾದ ಪಿ.ಎಸ್.ರಮೇಶ ಪ್ರಾಸ್ತಾವಿಕವಾಗಿ ಮಾತನಾಡಿ, ಬಂದಿಗಳ ದಟ್ಟಣೆಯನ್ನು ಕಡಿಮೆ ಮಾಡಿ, ಶಿಕ್ಷಾ ಹಾಗೂ ವಿಚಾರಣಾ ಬಂದಿಗಳ ಮನಃ ಪರಿವರ್ತನೆ, ಸುಧಾರಣಾ ಕಾರ್ಯಕ್ರಮಗಳು, ಬಂದಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸುವುದರ ಮೂಲಕ ಬಂಧಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅನೇಕ ಯೋಜನೆಗಳನ್ನು ರೂಪಿಸುವುದು ಈ ಸಂದರ್ಶಕ ಮಂಡಳಿ ಸಭೆಯ ಮುಖ್ಯ ಉದ್ದೇಶವಾಗಿದೆ. ಬಂಧಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಕಾರಾಗೃಹದ ಅಭಿವೃದ್ಧಿಗಾಗಿ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದರು.

ಸಭೆಯಲ್ಲಿ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ ನ್ಯಾಯಾಧೀಶ ವಿ.ಎನ್.ಜಗದೀಶ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪ್ರಸನ್ನಕುಮಾರ ದೇಸಾಯಿ, ಮಂಡಳಿಯ ಅಧಿಕಾರೇತರ ಸದಸ್ಯರು ಹಾಗೂ ಸಮಾಜ ಸೇವಕರಾದ ಶರಣಬಸಪ್ಪ ಪಪ್ಪಾ, ಶಿವಶರಣಪ್ಪ ಎನ್.ಸಿರೆ ಹಾಗೂ ಲೋಕೊಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಬಿ. ಶರತ್ ಅವರು ಸಂದರ್ಶಕ ಮಂಡಳಿ ಸದಸ್ಯರೊಂದಿಗೆ ಕಾರಾಗೃಹವನ್ನು ಪರಿಶೀಲಿಸಿ ಕಾರಾಗೃಹದ ಅಡುಗೆ ಕೋಣೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ ಸ್ಟೀಮ್ ಕುಕ್ಕಿಂಗ್ (ಪಾಕ ಶಾಲೆ) ಅಡುಗೆ ವ್ಯವಸ್ಥೆಯನ್ನು ಉದ್ಘಾಟಿಸಿದರು. ಕಾರಾಗೃಹದ ಅಧೀಕ್ಷಕ ಡಾ. ಐ.ಜೆ.ಮ್ಯಾಗೇರಿ ಸ್ವಾಗತಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here