ಬಿಸಿ ಬಿಸಿ ಸುದ್ದಿ

ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು: ಭೀಮರತ್ನ

ಶಹಾಪುರ: ಡಾ: ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಸಮಾಜದ ಪ್ರತಿಯೊಬ್ಬ ನಾಗರಿಕರು ಗೌರವಿಸಬೇಕು ಎಂದು ಇನ್ಸ್ಪೆಕ್ಟರ್ ಭೀಮರತ್ನ ಹೇಳಿದರು.

ಶಹಾಪುರದ ಶ್ರೀ ಚರಬಸವೇಶ್ವರ ಮಹಿಳಾ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ವತಿಯಿಂದ ಹಮ್ಮಿಕೊಂಡಿರುವ ಅಂಬೇಡ್ಕರ್ ಅವರ ಪುಸ್ತಕ ಓದು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಾ ಮಾತನಾಡಿದರು.

ಕಾರ್ಯಕ್ರಮವು ಉದ್ಘಾಟಿಸಿದ ಕಲಬುರಗಿಯ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ಮಾತನಾಡಿ ಅಂಬೇಡ್ಕರ್ ಅವರ ಆಚಾರ ವಿಚಾರಗಳು ಅವರ ಉದ್ದೇಶಗಳು ಇಂದಿನ ಯುವಜನತೆಗೆ ಅತ್ಯಗತ್ಯವಾಗಿವೆ ಇಂಥ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯ ಶ್ಲಾಘನೀಯವಾದದ್ದು ಎಂದು ಬಣ್ಣಿಸಿದರು.

ಈ ಕಾರ್ಯಕ್ರಮದ ಸಂದರ್ಭದಲ್ಲಿ ರಸಪ್ರಶ್ನೆ, ಆಶುಭಾಷಣ, ಪ್ರಬಂಧ ಸ್ಪರ್ಧೆ, ಕವನ ವಾಚನದ ಜೋತೆಗೆ ಹಲವಾರು ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ, ಮತ್ತು ದ್ವಿತೀಯ, ತೃತೀಯ, ಸ್ಥಾನ ಪಡೆದ ವಿದ್ಯಾರ್ಥಿನಿಯರಿಗೆ ಅಂಬೇಡ್ಕರ್ ಪುಸ್ತಕವನ್ನು ಬಹುಮಾನವಾಗಿ ನೀಡಿ ಪ್ರೋತ್ಸಾಹಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಧರ್ಮನಗೌಡ ಬಿರಾದಾರ್ ಅಧ್ಯಕ್ಷತೆ ವಹಿಸಿಕೊಂಡಿದ್ದರು ಈ ಸಮಾರಂಭದ ವೇದಿಕೆಯ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ದತ್ತಪ್ಪ ಸಾಗನೂರು, ಬಾಪುಗೌಡ ದಶ೯ನಾಪುರ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶಿವಲಿಂಗಣ್ಣ ಸಾಹು,ಹಿರಿಯ ಸಾಹಿತಿಗಳಾದ ಶ್ರೀ ಮಹಮ್ಮದ್ ಚಾಂದ್ ಪಾಷಾ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಸವರಾಜ ಸಿನ್ನೂರ,ಸಿದ್ದಣ್ಣ ನೀರಲಗಿ, ವಿಶ್ವನಾಥ ಗದ್ದುಗೆ, ಸಂಗಣ್ಣ ದಿಗ್ಗಿ, ನಿರ್ಣಾಯಕರಾಗಿ ಆಗಮಿಸಿದ್ದರು ಹಾಗೂ ಇತರರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಮಹೇಶ್ ಪತ್ತಾರ ಪ್ರಾರ್ಥಿಸಿದರು, ನಿರ್ಮಲಾ ತುಂಬಗಿ ನಿರೂಪಿಸಿದರು, ಸತೀಶ ತುಳೇರ ವಂದಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago