ರಾಯಚೂರು: ಇಲ್ಲಿನ ಹಟ್ಟಿ ಪಟ್ಟಣದ ಮೆಟ್ರಿಕ್-ನಂತರದ ಹಾಸ್ಟೆಲ್ ಗೆ ಮೂಲಭೂತ ಸೌಕರ್ಯ ಒದಗಿಸುವುದಾಗಿ ಸುಳ್ಳು ಭರವಸೆ ನೀಡಿದ ವಾರ್ಡನ್ ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ವೀರಾಪುರ್ ಆಗ್ರಹಿಸಿದ್ದಾರೆ.
ಜಿಲ್ಲೆಯ ಹಟ್ಟಿ ಪಟ್ಟಣದ ಮೆಟ್ರಿಕ್ ನಂತರ ಹಾಸ್ಟೆಲ್ಗೆ ಮೂಲಭೂತ ಸೌಕರ್ಯ ನೀಡಲು ಎಸ್ಎಫ್ಐನಿಂದ ಅಕ್ಟೋಬರ್ 9 ರಂದು ಪ್ರತಿಭಟನೆ ನಡೆಸಲಾಗಿತ್ತು. ಅಂದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಸುಬ್ರಮಣ್ಯ, ತಾಲೂಕ ಸಮಾಜ ಕಲ್ಯಾಣ ಅಧಿಕಾರಿ ಎಂ. ರವಿ ಹಾಗೂ ಮೇಲ್ವಿಚಾರಕ ಚಂದ್ರಶೇಖರ್ ಸಂಘಟನೆ ಇಟ್ಟಿದ್ದ ಬೇಡಿಕೆಗಳನ್ನು15 ದಿನಗಳ ಒಳಗಾಗಿ ಈಡೇರಿಸುವುದಾಗಿ ಭರವಸೆ ನೀಡಿ ಮನವಿ ಪತ್ರದಲ್ಲಿ ಲಿಖಿತವಾಗಿ ಬರೆದು ಕೊಟ್ಟಿದ್ದರು. 15 ದಿನಗಳಲ್ಲಿ ಎಂದು ಬರೆದುಕೊಟ್ಟ ಅಧಿಕಾರಿಗಳು ಒಂದೂವರೆ ತಿಂಗಳು ಕಳೆದರು ಕೂಡ ಹಾಸ್ಟೆಲ್ ನ ಸಮಸ್ಯೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ಅಸಡ್ಡೆ ತೋರಿದ್ದಾರೆ ಎಂದು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುದ್ಧ ಕುಡಿಯುವ ಹಾಸ್ಟೆಲ್ಗಳಿಗೆ ಗೇಟ್, ಸೆಕ್ಯೂರಿಟಿ. ಲೈಟ್, ವೈರಿಂಗ್, ಕಂಪ್ಯೂಟರ್, ವೈಫೈ, ಲೈಬ್ರರಿ, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಸೊಳ್ಳೆ ಪದರಿ, ಸೋಲಾರ್, ಕ್ರೀಡಾ ಸಾಮಗ್ರಿ, ಬೆಡ್ಶೀಟ್ ಸೇರಿದಂತೆ ಅಗತ್ಯ ಮೂಲಭೂತ ವಸ್ತುಗಳು ಇಲ್ಲದೆ ಹಾಸ್ಟೆಲ್ ಹಂದಿಗಳ ಗೂಡಿನಂಥಾಗಿದ್ದು, ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಡಿಸೆಂಬರ್ 5ರೊಳಗಾಗಿ ಇತ್ತ ಗಮನಹರಿಸದೆ ಹೋದರೆ ಹಾಸ್ಟೆಲ್ ಗೆ ಬೀಗ ಜಡಿದು ಮತ್ತೆ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ಎಚರಿಕೆ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…