ಬೆಂಗಳೂರು: ‘ಬಿಜೆಪಿಯ ನಡೆಗಳಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಅಧಿಕಾರ ದುರುಪಯೋಗವಾಗುತ್ತಿದೆ. ಪ್ರತೀ ಚುನಾವಣೆಯಲ್ಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿ, ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ವಿವಿಧ ರಾಜ್ಯ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿವೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಉಪಚುನಾವಣೆಯಲ್ಲಿ ನಮ್ಮ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಾರೆ. ಡಿ.9 ರಂದು ಫಲಿತಾಂಶ ಬರಲಿದ್ದು, ಅಂದೇ ಸಿಹಿ ಸುದ್ದಿ ನೀಡಲಿದ್ದೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮತ್ತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಸುಳಿವು ನೀಡಿದ್ದಾರೆ.