ಕಲಬುರಗಿ: ಜಗತ್ತಿನ ಭೀಕರ ರೋಗವಾದ ಏಡ್ಸ್‌ವು ವಿವಿಧ ಕಾರಣಗಳಿಂದ ಉಂಟಾಗುತ್ತಿದ್ದು ಅದಕ್ಕೆ ನಿರ್ಧಿಷ್ಟ ಔಷಧಿಯಿಲ್ಲ. ಅದರ ಬಗ್ಗೆ ಮುನ್ನೆಚ್ಚರಿಕೆಯ ಜಾಗೃತಿಯು ಎಲ್ಲೆಡೆ ಮೂಡಿಸುತ್ತಿರುವದು ಔಚಿತ್ಯಪೂರ್ಣವಾಗಿದೆ. ಇದರಿಂದ ಈ ರೋಗ ಪೀಡಿತರ ಸಂಖ್ಯೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಇಳಿಮುಖವಾಗುತ್ತಿದೆಯೆಂದು ವೈದ್ಯಾಧಿಕಾರಿ ಡಾ.ಅನುಪಮಾ ಕೇಶ್ವಾರ ಹೇಳಿದರು.
ಅವರು ನಗರದ ಶೇಖರೋಜಾದಲ್ಲಿರುವ ಶಹಾಬಜಾರ ’ನಗರ ಪ್ರಾಥಮಿಕ ಆರೋಗ್ಯ ಕೇಂದ’ದಲ್ಲಿ ಭಾನುವಾರ ಏರ್ಪಡಿಸಿದ್ದ ’ವಿಶ್ವ ಏಡ್ಸ್ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಸುರಕ್ಷಿತ ಲೈಂಗಿಕ ಸಂಪರ್ಕ, ರೋಗ ಪೀಡಿತ ತಾಯಿಯಿಂದ ಮಗುವಿಗೆ ಪ್ರಸಾರ, ರೋಗಿ ಬಳಸಿದ ಬ್ಲೇಡ್, ಸೀರೆಂಜ ಬಳಸುವುದು ಸೇರಿದಂತೆ ಮತ್ತೀತರ ಕಾರಣಗಳಿಂದ ರೋಗ ಹರಡುತ್ತದೆ. ಆದರೆ ರೋಗಪೀಡಿತ ವ್ಯಕ್ತಿಯ ಜೊತೆ ಮಾತನಾಡುವದರಿಂದ, ಮುಟ್ಟುವದರಿಂದ, ಬಳಸಿದ ವಸ್ತುಗಳನ್ನು ಮುಟ್ಟುವದರಿಂದ, ಗಾಳಿ ತೆಗೆದುಕೊಳ್ಳುವದರಿಂದ ಈ ರೋಗ ಹರಡುವದಿಲ್ಲ. ಇದರ ಬಗ್ಗೆ ಅನಾವಶ್ಯಕವಾದ ಭಯ ಬೇಡ ಮತ್ತು ಜಾಗೃತಿ ಮೂಡಿಸಬೇಕೆಂದು ನುಡಿದರು.
ಮುಖ್ಯ ಅತಿಥಿಯಾಗಿದ್ದ ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಏಡ್ಸ್ ರೋಗಕ್ಕೆ ಕಾರಣವಾದ ಅಂಶಗಳು ಮತ್ತು ಅದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳು ಸೇರಿದಂತೆ ರೋಗಕ್ಕೆ ಸಂಬಂಧಿಸಿದಂತೆ ವಿಷಯಗಳನ್ನು ಎಲ್ಲೆಡೆ ಜಾಗೃತಿ ಮೂಡಿಸಬೇಕೆಂಬ ಉದ್ದೇಶ ಈ ದಿನದ ಹಿನ್ನಲೆಯಾಗಿದೆ. ಯಾವುದೇ ರೋಗ ಬಂದ ನಂತರ ಆಸ್ಪತ್ರೆಗೆ ತೆರಳಲು ಅವಕಾಶ ನೀಡದೆ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಬೇಕು. ರೋಗಪೀಡಿತರ ಬಗ್ಗೆ ಸಮಾಜ ಕೀಳರಿಮೆ ತಾಳದೆ, ಅವರಿಗೆ ತೊಂದರೆ ನೀಡಿದರೆ, ಅವರು ಮಾನಸಿಕವಾಗಿ ಮತ್ತಷು ಕುಗ್ಗಿ ಬೇಗನೆ ಸಾವಿಗೆ ತುತ್ತಾಗುತ್ತಾರೆ. ಆದ್ದರಿಂದ ಅವರಿಗೂ ಕೂಡಾ ಬದಕಲು ಅನವು ಮಾಡಿಕೊಡುವ ಮೂಲಕ ಮಾನವೀಯತೆಯನ್ನು ಮೆರೆಯಬೇಕಾಗಿದೆಯೆಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಬಸವರಾಜ ಪುರಾಣೆ, ಸಹ ಶಿಕ್ಷಕ ಅಮರ ಬಂಗರಗಿ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಗಂಗಾಜ್ಯೋತಿ ಗಂಜಿ, ಚಂದಮ್ಮ ಶೀಖೆ, ಗಿರೀಶ ಶೀಖೆ, ದೀಶಾ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಬಡಾವಣೆಯ ನಾಗರಿಕರು ಭಾಗವಹಿಸಿದ್ದರು. ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…