ಬಿಸಿ ಬಿಸಿ ಸುದ್ದಿ

ವಚನಾಂತರಂಗದ ಅವಲೋಕನ: ಸ್ವಾಗತ ಸಮಿತಿಗೆ ಶರ್ಮಾ ಅಧ್ಯಕ್ಷ, ಚಿಂಚನಸೂರ ಕಾರ್ಯಾಧ್ಯಕ್ಷ

ಕಲಬುರಗಿ: ಸಮೃದ್ಧಿಯ ಸವಿನೆನಪಿನಲ್ಲಿ ಇಲ್ಲಿನ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ‘ಸಹಸ್ರಮಾನದ ಶರಣ’ ಎನ್ನುವ ವಚನಾಂತರಂಗದ ಅವಲೋಕನ ಎಂಬ ಒಂದು ದಿನದ ವೈಚಾರಿಕ ಚಿಂತನಾ ಸಮಾವೇಶದ ಪೂರಕವಾಗಿ ರಚಿಸಲ್ಪಟ್ಟ ಸ್ವಾಗತ ಸಮಿತಿಗೆ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಶರ್ಮಾ, ಭಾರತೀಯ ಖಾಧ್ಯ ಆಹಾರ ನಿಗಮದ ಸದಸ್ಯ ಡಾ.ರಾಘವೇಂದ್ರ ಚಿಂಚನಸೂರ ಅವರನ್ನು ಅಧಿಕೃತ ಆಹ್ವಾನ ನೀಡಿ, ವಿಶೇಷವಾಗಿ ಗೌರವಿಸಲಾಯಿತು.

ನಂತರ ಮಾತನಾಡಿದ ಡಾ.ಸುರೇಶ ಶರ್ಮಾ, ಡಾ.ರಾಘವೇಂದ್ರ ಚಿಂಚನಸೂರ ಮಾತನಾಡಿ, ಹನ್ನೇರಡನೆಯ ಶತಮಾನದಲ್ಲಿಯೇ ಬಸವಾದಿ ಶರಣರು ವರ್ಣ, ವರ್ಗ ವ್ಯವಸ್ಥೆಯ ವಿರುದ್ಧ ಸಮಾನತೆಯ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಬಹುದೊಡ್ಡ ವೈಚಾರಿಕ ಕ್ರಾಂತಿ ನಡೆಸಿದ್ದರು ಎಂದು ಹೇಳಿದ ಅವರು, ಬುದ್ಧ, ಬಸವ, ಡಾ.ಅಂಬೇಡ್ಕರ್ ವಿಚಾರಧಾರೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಅಕಾಡೆಮಿಯ ಪದಾಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದು ಮನದುಂಬಿ ಮಾತನಾಡಿದರು.

ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕೆಳ ವರ್ಗದ ಜನರನ್ನು ಪ್ರಾಣಿಗಳಿಗಿಂತ ಕಡೆಯಾಗಿ ಕಾಣುತ್ತಿದ್ದ ಅಂದಿನ ದಿನಮಾನಗಳಲ್ಲಿ ಕೆಳವರ್ಗದ ಜನರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟು, ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಕಲ್ಪನೆಯನ್ನು ಜಾರಿಗೆ ತಂದವರು ಬಸವಾದಿ ಶರಣರು ಎಂದು ಹೇಳಿದ ಅವರು, ವಚನಗಳಲ್ಲಿನ ತಿರುಳನ್ನು ಇಂದಿನ ಯುವ ಜನತೆಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ ಎಂದರು.

ಸಮಾಜದ ಹಿರಿಯ ಮುಖಂಡ ಕಲ್ಯಾಣಪ್ಪ ಪಾಟೀಲ ಮಳಖೇಡ, ಅಕಾಡೆಮಿಯ ಶಿವರಾಜ ಅಂಡಗಿ, ಮಾಲತಿ ರೇಷ್ಮಿ, ಶಿವರಾಜ ಅಂಡಗಿ, ಪರಮೇಶ್ವರ ಶಟಕಾರ, ಶಿವಾನಂದ ಮಠಪತಿ, ಪ್ರಮುಖರಾದ ಜಗದೀಶ ಮರಪಳ್ಳಿ, ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ಮಹಾಂತೇಶ ಕಲಬುರಗಿ, ದಿನೇಶ ದೊಡ್ಮನಿ, ವಿದ್ಯಾಸಾಗರ ದೇಶಮುಖ, ಹಣಮಂತ ಇಟಗಿ, ರಾಜು ಕಾಡಾದಿ, ಸತೀಶ ಸಜ್ಜನ್, ಶಿವಲಿಂಗ ಹಳಿಮನಿ, ಸುವರ್ಣ ಗೌಡ, ಪ್ರಸನ್ನ ವಾಂಜರಖೇಡೆ, ನೀಲಾಂಬಿಕಾ ಚೌಕಿಮಠ, ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವಚನ ಕಂಠಪಾಠ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ವಚನ ಸಂಸ್ಕೃತಿಯನ್ನು ಬಿತ್ತುವ ಉದ್ದೇಶದಿಂದ ಡಿ.4 ರಂದು ಬೆಳಗ್ಗೆ 10.45 ಕ್ಕೆ ನಗರದ ಜಿಲ್ಲಾ ಕೋರ್ಟ್ ಹಿಂಭಾಗದಲ್ಲಿರುವ ಬಸವ ಮಂಟಪದಲ್ಲಿ ವಿದ್ಯಾರ್ಥಿಗಳಿಂದ ವಚನ ಕಂಠ ಪಾಠ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಆಸಕ್ತರು ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ-ಮೊ.98803 49025 ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago