ಕಲಬುರಗಿ: ಜಿಲ್ಲೆಯ ಹರಗುರು ಚರಮೂರ್ತಿಗಳ ಸಂಪರ್ಕ ಮಾಡಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಜಗದ್ಗುರು ಶ್ರೀ ರೇಣುಕಾಚಾರ್ಯರ ಹೆಸರಿಡುವುದಕ್ಕೆ ಸರ್ಕಾರದ ಗಮನ ಸೆಳೆಯುವುದು ಮತ್ತು ಕಲಬುರಗಿ ಮಹಾನಗರದಲ್ಲಿ ಬೃಹತ್ ಪ್ರತಿಭಟನೆ ಮಾಡುವುದು ಸೇರಿದಂತೆ ವಿವಿಧ ನಿರ್ಣಯಗಳ ಬಗ್ಗೆ ನಗರದ ಕನ್ನಡ ಭವನದಲ್ಲಿ ಜರುಗಿದ ಜಗದ್ಗುರು ಶ್ರೀ ರೇಣುಕಾಚಾರ್ಯ ಸದ್ಭಕ್ತ ಮಂಡಳಿ ವತಿಯಿಂದ ಸಭೆ ಜರುಗಿತು.
ಮಂಡಳಿಯ ಗೌರವ ಅಧ್ಯಕ್ಷರಾದ ಅನೀಲಕುಮಾರ ಜಮಾದಾರ ಮತ್ತು ಅಧ್ಯಕ್ಷರಾದ ಅಣವೀರಯ್ಯ ಪ್ಯಾಟಿಮನಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಅನೇಕ ಹಿರಿಯ ಮುಖಂಡರು ಭಾಗವಹಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಕುರಿತು ಅಮೂಲ್ಯವಾದ ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಬಸವರಾಜ ಕೋಲಕುಂದಿ, ಶಿವಲಿಂಗಯ್ಯ ಸ್ವಾಮಿ ಸಾವಳಗಿ, ವಿಶ್ವನಾಥ ಸುಲೇಪೇಟ, ಶಿವು ಸ್ವಾಮಿ, ವಿಶ್ವನಾಥ ರೆಡ್ಡಿ ಎಸ್.ಅನಂತರೆಡ್ಡಿ, ಸಿದ್ರಾಮಯ್ಯ ವಿ.ಪುರಾಣಿಕ, ಸೋಮಶೇಖರ ಹಿರೇಮಠ ಗುರುಮಿಟಕಲ್, ಗುರುನಂಜಯ್ಯ ಈರಣಗುಡಿ, ಗುರುಸಂಗಯ್ಯ ಪುರಾಣಿಕಮಠ, ಎನ್.ಎಸ್.ಹಿರೇಮಠ, ಶಿವಾನಂದ ಮಠಪತಿ, ಗಂಗಾಧರ ಸ್ವಾಮಿ ಅಗ್ಗಿಮಠ, ಮಹಾಂತಯ್ಯ ಕೆಳಗಿನಮಠ, ಫಕೀರಯ್ಯ ಸ್ವಾಮಿ ಟೇಂಗಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…