ಕಲಬುರಗಿ/ಚಿಂಚೋಳಿ: ಎಂಟು ವರ್ಷದ ಬಾಲಕಿಯ ಮೇಲೆ ಹತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆಗೈದಿರುವ ದಾರುಣ ಘಟನೆ ಚಿಂಚೋಳಿ ತಾಲೂಕಿನ ಯಾಕಾಪುರ ಗ್ರಾಮದಲ್ಲಿ ನಡೆದಿದ್ದು, ಹೈದರಾಬಾದ್ನಲ್ಲಿ ಪಶುವೈದ್ಯೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಇಡೀ ದೇಶವೇ ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು. ಇತ್ತ ಕರ್ನಾಟಕದಲ್ಲಿಯೂ ಹೆಣ್ಣುಮಕ್ಕಳ ಮೇಲೆ ಕಾಮುಕರು ವಿಕೃತಿ ಮೆರೆಯುತ್ತಿರುವ ಘಟನೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ.
ಯಾಕಾಪುರ ಗ್ರಾಮದ 2 ನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿಯ ಮೃತದೇಹ ಗ್ರಾಮದ ಅಂಗನವಾಡಿ ಬಳಿ ಪತ್ತೆಯಾಗಿದೆ. ದುಷ್ಕರ್ಮಿಗಳು ಮೊದಲು ಬಾಲಕಿ ಮೇಲೆ ಅತ್ಯಾಚಾರ ಎಸಗಿ, ನಂತರ ಕೊಲೆಗೈದು ಕ್ರೂರತೆ ಮೆರೆದಿದ್ದಾರೆ. ಇದೇ ಗ್ರಾಮದ ವ್ಯಕ್ತಿಯೊಬ್ಬ ಕೃತ್ಯವೆಸಗಿರುವ ಆರೋಪ ಕೇಳಿಬಂದಿರುವ ಹಿನ್ನಲೆ ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿತ್ತಿದ್ದಾರೆ.
ಸೋಮವಾರ ಮಧ್ಯಾಹ್ನ ಯಲ್ಲಪ್ಪ (35) ಎಂಬ ವ್ಯಕ್ತಿ ಅರೋಪಿ ಬಾಲಕಿಯನ್ನು ಕರೆದುಕೊಂಡು ಓಡಾಡುತ್ತಿದ್ದಗ ಗ್ರಾಮಸ್ಥರು ನೋಡಿದ್ದರು ಎನ್ನಲಾಗಿದೆ.
ಘಟನೆಯ ಸಾರಂಶ: ಮೃತ ಬಾಲಕಿ ಮಂದ ಬುದ್ದಿಯವಳಾಗಿದ್ದಳು ಎನ್ನಲಾಗಿದ್ದು, ಯಾಕಾಪುರದ ಅಂಗನವಾಡಿ ಕೇಂದ್ರದಿಂದ ಚಾಕೊಲೇಟ್ ನೀಡುವ ಆಸೆ ತೋರಿಸಿ ಆಕೆಯನ್ನು ಕಾಲುವೆ ಕರೆದುಕೊಂಡು ಹೋಗಿದ್ದ ಆರೋಪಿ, ತನ್ನ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದ್ದು. ಮುಲ್ಲಾಮರಿ ಯೋಜನೆ ಕಾಲುವೆ ಬಳಿ ಬಾಲಕಿ ಶವವಾಗಿ ಪತ್ತೆಯಾಗಿದ್ದರಿಂದ ಸಾರ್ವಜನಿಕರು ಯಲ್ಲಪ್ಪನ ಮೇಲೆ ಅನುಮಾನಿಸಿ ವಿಚಾರಿಸಿದರೆ. ಬಾಲಕಿ ಸಾವಿಗೂ ತನಗೂ ಯಾವ ಸಂಬಂಧ ಇಲ್ಲ ಎಂದು ವಾದಿಸುತ್ತಿದ್ದ ಎಂದು ತಿಳಿದುಬಂದಿದ್ದು, ಘಟನೆಯ ಸುದ್ದಿ ಕೇಳಿ ಸ್ಥಳಕ್ಕೆ ಬಂದ ಸುಲೇಪೇಟ ಪೊಲೀಸ್ ಠಾಣಾ ಪೊಲೀಸರು ಆರೋಪಿ ಯಲ್ಲಪ್ಪನನ್ನು ವಶಕ್ಕೆ ಪಡೆದು ಸತ್ಯ ಬಾಯಿ ಬಿಡಿಸಿದ್ದಾರೆ ಎಂದು ಹೇಳಲಾಗಿದೆ.
ರಾತ್ರಿ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾಡಾ ಮಾರ್ಟಿನ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ಸಾರ್ವಜನಿಕರಲ್ಲದೆ ಬಾಲಕಿ ಓದುತ್ತಿದ್ದ ಶಾಲೆಯ ಮಕ್ಕಳು ಸೇರಿ ಇತರೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟಿಸುತ್ತಿದ್ದಾರೆ. ಸ್ಥಳಕ್ಕೆ ಡಿಸಿ, ಎಸ್ಪಿ ಬರಬೇಕು. ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ. ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತ ಬಾಲಕಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಇದರಿಂದ ಗ್ರಾಮದಲ್ಲಿ ಎರಡು ಕೋಮಿನ ಮಧ್ಯೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಒಂದು ಕಡೆ ಯಾದರೆ,ಇನ್ನೊಂದೆಡೆ ಸ್ವಯಂ ಘೋಷಿತ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆಗೆ ಇಳಿದಿದ್ದಾರೆ. ರಸ್ತೆ ಸಂಚಾರ ಬಂದ್ ಮಾಡಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಜಾಗೃತ ಕ್ರಮವಾಗಿ ಪೊಲೀಸರು ಗಾಮದಲಿ ಮೊಕಾಂ ಹೂಡಿದಾರೆ. ಈ ಕುರಿತು ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…