ಬಿಸಿ ಬಿಸಿ ಸುದ್ದಿ

ವಿಶೇಷಚೇತನರಿಗೆ ಸಮಾನ ಅವಕಾಶಗಳು ದೊರೆಯಲಿ: ಕನೀಜ್ ಫಾತಿಮಾ

ಕಲಬುರಗಿ: ವಿಶೇಷಚೇತನ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳು ಜೊತೆಗೆ ಸಮಾಜದಲ್ಲಿ ಸಮಾನವಾಗಿ ಕಾಣಲು ಸಮಾನ ಅವಕಾಶಗಳು ದೊರೆಯುವಂತಾಗಬೇಕು ಎಂದು ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಖನೀಜ್ ಫಾತೀಮಾ ಹೇಳಿದರು.

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ವಿಕಲಚೇತನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಮಂಗಳವಾರ ಕಲಬುರಗಿ ನಗರದ ಜಿಲ್ಲಾ ಪಂಚಾಯತ್ ಹಳೇ ಸಭಾಂಗಣದಲ್ಲಿ ಆಯೋಜಿಸಿದ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷಚೇತನ ಮಕ್ಕಳಿಗೆ ಅನುಕಂಪ ತೋರಿಸುವ ಬದಲು ಅವಕಾಶಗಳನ್ನು ನೀಡಿ. ಸಾಮಾನ್ಯ ಜನರ ಹಾಗೆ ಅವರಿಗೂ ಬದುಕಲು ಉತ್ತೇಜನ ನೀಡಿ. ವಿಶೇಷಚೇತನರಿಗೆ ಸರ್ಕಾರವು ಹತ್ತು-ಹಲವು ಯೋಜನೆಗಳು ಜಾರಿಗೆ ತಂದಿದ್ದು, ಅವುಗಳ ಪರಿಣಾಮಕಾರಿ ಅನುಷ್ಠಾನ ಮಾಡುವ ಮೂಲಕ ನಿಜವಾದ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವತ್ತ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕರಪ್ಪ ವಣಿಕ್ಯಾಳ್ ಮಾತನಾಡಿ, ಇತ್ತೀಚಿಗೆ ಅಂಧ ಬಾಲಕಿಯೊಬ್ಬಳು ಐ.ಎ.ಎಸ್. ಅಧಿಕಾರಿಯಾಗಿ ನೇಮಕಗೊಂಡಿದ್ದು ವಿಶೇಷ ಚೇತನರಿಗೆ ಮಾದರಿಯಾಗಿದ್ದಾಳೆ. ವಿಶೇಷ ಚೇತನ ಮಕ್ಕಳಲ್ಲಿ ದೇವರು ವಿಶೇಷವಾದ ಶಕ್ತಿಯನ್ನು ನೀಡಿರುತ್ತಾನೆ. ಅದನ್ನು ಬಳಿಕೊಂಡು ಸಾಧನೆಯ ಶಿಖರ ಹತ್ತಬೇಕಾಗಿದೆ. ವಿಶೇಷಚೇತನರು ಯಾವತ್ತು ಅಸಾಹಯಕರು ಎಂದು ತಿಳಿದುಕೊಳ್ಳದಿರಿ ಎಂದು ವಿಶೇಷ ಚೇತನ ಮಕ್ಕಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿ ವೇತನ, ಮಾಸಶಾನ, ಸಂಧ್ಯಾ ಸುರಕ್ಷಾ ಯೋಜನೆಯಡಿಯಲ್ಲಿ ಬರುವ ಅನುದಾನಕ್ಕೆ ವಿಕಲಚೇತನರು ದಲ್ಲಾಳಿಗಳಿಗೆ ಕಮಿಷನ್ ನೀಡಿ ಹಣ ಪಡೆದುಕೊಳ್ಳುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು ಇದನ್ನು ತಡೆಯಲೆಂದೆ ಸರ್ಕಾರವು ಬ್ಯಾಂಕ್ ಖಾತೆಗೆ ಅಧಾರ್ ಜೋಡಣೆ ಮಾಡಲಾಗುತ್ತಿದ್ದು, ದುರುಪಯೋಗಕ್ಕೆ ಕಡಿವಾಣ ಬೀಳಲಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್ ಮಾತನಾಡಿ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಯೋಜನೆಗಳಲ್ಲಿ ಶೇ.೫ ರಷ್ಟು ಅನುದಾನ ವಿಕಲಚೇತನರಿಗೆ ಮೀಸಲಿಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಅಪ್ಪಾರಾವ ಅಕ್ಕೋಣಿ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ್ ಚಿಂಚೋಳಿಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿವಶರಣಪ್ಪ, ಸಹಕಾರ ಸಂಸ್ಥೆಯ ಕಾರ್ಯದರ್ಶಿ ರಾಜು ಶಿವಶರಣಪ್ಪ, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿ ದತ್ತು ಅಗರವಾಲ್ ಸೇರಿದಂತೆ ವಿವಿಧ ಶಾಲೆಯ ವಿಶೇಷ ಚೇತನ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದರು.

ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಆಯೋಜಿಸಿದ ಕ್ರೀಡಾಕೂಟದಲ್ಲಿ ವಿಜೇತ ಮಕ್ಕಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಬನ್ಸಿ ಆರ್. ಪವಾರ ಪ್ರಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಹಡಪದ ನಿರೂಪಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago