ಬಿಸಿ ಬಿಸಿ ಸುದ್ದಿ

ಆಲೂರ: ಮಕ್ಕಳ ವಿಜ್ಞಾನ ಹಬ್ಬಕ್ಕೆ ಚಾಲನೆ

ಯಡ್ರಾಮಿ: ಸಮೀಪದ ಆಲೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಆಲೂರ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬವನ್ನು ಉದ್ಘಾಟಿಸಲಾಯಿತು.

ಈ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ಸಂಯೋಜಕರಾದ ಪ್ರಭುಗೌಡ ದೇಸಾಯಿ, ರಾಯಪ್ಪ ದೋರನಹಳ್ಳಿ, ಆಲೂರ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶಾಂತಪ್ಪ ಬಿರಾದಾರ, ಷಣ್ಮುಖಪ್ಪ ಭಜಂತ್ರಿ,ಯಡ್ರಾಮಿ ತಾಲ್ಲೂಕಿನ ಸರಕಾರಿ ನೌಕರರ ಸಂಘದ ಸದಸ್ಯರಾದ ವಿಜಯಕುಮಾರ ಬಡಿಗೇರ, ಯಡ್ರಾಮಿ ತಾಲ್ಲೂಕಿನ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಾಂತಮೂರ್ತಿ ಗೊಂಬಿಮಠ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ, ದೀಪಕ್ ಹಾಗೂ ಆಲೂರು ಕ್ಲಸ್ಟರಿನ ಎಲ್ಲಾ ಮುಖ್ಯ ಗುರುಗಳು ಹಾಜರಿದ್ದರು.ಆಲೂರ ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿಗಳಾದ ಭೀಮಾಶಂಕರ ಬಿರಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಕ್ಕಳ ವಿಜ್ಞಾನ ಹಬ್ಬವನ್ನು ಯಾಕೆ ಆಚರಿಸಲಾಗುತ್ತದೆ? ಇದರ ಹಿಂದಿರುವ ಉದಾತ್ತ ಉದ್ದೇಶವೇನು? ಎಂಬುದನ್ನು ವಿವರಿಸಿದರು.ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಜೊತೆಗೆ  ಮೂಢನಂಬಿಕೆಗಳ ಮೂಲೋತ್ಪಾಟನೆ ಮಾಡಲು ಈ ರೀತಿಯ ಮಕ್ಕಳ ವಿಜ್ಞಾನ ಹಬ್ಬಗಳು ಸಹಕಾರಿಯಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಿಕ್ಷಣ ಸಂಯೋಜಕರಾದ ಪ್ರಭುಗೌಡ ಸ್ಥಳೀಯ ಸರಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶಾಂತಪ್ಪ ಬಿರಾದಾರ ಇವರು ವಿಜ್ಞಾನದ ಮಹತ್ವದ ಬಗ್ಗೆ ಮಾತನಾಡಿದರು.

ಮಕ್ಕಳಿಂದ ವಿವಿಧ ವೈಜ್ಞಾನಿಕ ಚಟುವಟಿಕೆಗಳನ್ನು ಮಾಡಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕ ಸಿದ್ದಪ್ಪ ಸಾಥಖೇಡ ನಿರೂಪಿಸಿದರು.ಶಿಕ್ಷಕರಾದ ಸೈದಪ್ಪ ಜ್ಞಾನೇಶ,ಪರಶುರಾಮ,ರಮೇಶ,ಶಿವರಾಜ,ಸಾಹೇಬಗೌಡ ಹಾಗೂ ಶಿಕ್ಷಕಿಯರಾದ ಕವಿತಾ,ರಾಜೇಶ್ವರಿ ಸೇರಿದಂತೆ ಅನೇಕರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago