ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳಿಗೆ ಎಚ್.ಐ.ವಿ ಸೋಂಕಿನ ಬಗ್ಗೆ ಅರಿವು ಅಗತ್ಯ: ಡಾ.ಪಸ್ತಾಪುರ

ಕಲಬುರಗಿ: ಪ್ರಸ್ತುತ ಸಮಾಜದಲ್ಲಿ ಸಾವಿರಾರು ಜನರು ಎಚ್.ಐ.ವಿ ವೈರಾಣುವಿನ ಸೋಂಕಿನಿಂದ ಬಳಲುತ್ತಿದ್ದಾರೆ. ಪರಿಣಾಮ ಎಡ್ಸ್ ರೋಗ ಹೆಚ್ಚಾಗುತ್ತಿದೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಇಂತಹ ಮಹಾಮಾರಿ ರೋಗದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ಎಚ್.ಐ.ವಿ ಏಡ್ಸ್ ಖ್ಯಾತ ವೈದ್ಯ ಡಾ.ಮುರಗೇಶ ಪಸ್ತಾಪುರ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ಸ್ವಯಂ ಹಾಲನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಎಚ್.ಐ.ವಿ ಏಡ್ಸ್ ಖ್ಯಾತ ವೈದ್ಯ ಡಾ.ಮುರಗೇಶ ಪಸ್ತಾಪುರ ಮಾತನಾಡಿದರು. ಎಚ್.ಐ.ವಿ ಎಂದರೇ ಹ್ಯೂಮಾನ್ ಇಮ್ಯೂನೋ ಡೆಫಿಷಿಯನ್‌ಸ್ಸಿ ವೈರಸ್ ಆಗಿರುತ್ತದೆ. ಇದು ವ್ಯಕ್ತಿಯಿಂದ ವ್ಯಕ್ತಿಗೆ ಬೇಗನೆ ಹರಡುವ ಕಾಯಿಲೆಯಾಗಿದೆ. ಇದರಿಂದ ಸಂಭೋಗ ಕ್ರಿಯೆ ಮಾಡುವಾಗ ಕಾಂಡೊಮ್ ಬಳಸುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

ಪ್ರತಿಯೊಬ್ಬರು ಮೂರು ತಿಂಗಳಿಗೊಮ್ಮೆ ಎಚ್.ಐ.ವಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸರಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕಡ್ಡಾಯವಾಗಿ ಎಚ್.ಐ.ವಿ ರಕ್ತ ಪರೀಕ್ಷೆ ಮತ್ತು ಉಚಿತ ಚಿಕಿತ್ಸೆ ಲಭ್ಯವಿದೆ. ಎಚ್.ಐ.ವಿ ಮತ್ತು ಎಡ್ಸ್ ಸೋಂಕಿತ ವ್ಯಕ್ತಿಯ ಜೊತೆ ಊಟ ಮಾಡಿದರೇ ಮತ್ತು ಅವರಿಗೆ ಮುಟ್ಟಿದರೆ ಸೋಂಕು ತಗಲುವದಿಲ್ಲ. ಇದರಿಂದ ಸೋಂಕಿತರನ್ನು ಪ್ರೀತಿಯಿಂದ ಕಾಣಬೇಕು ಎಂದು ಡಾ.ಮುರಗೇಶ ಪಸ್ತಾಪುರ ಸಲಹೆ ನೀಡಿದರು.

ಶರಣಬಸವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ಸುಮಾರು ವರ್ಷಗಳ ಹಿಂದೆ ಏಡ್ಸ್ ರೋಗದ ಲಕ್ಷಣ ಕಡಿಮೆ ಪ್ರಮಾಣದಲ್ಲಿತ್ತು. ಆದರೆ ಪ್ರಸ್ತುತ ವಿಶ್ವಾದ್ಯಂತ ಏಡ್ಸ್ ರೋಗದ ಲಕ್ಷಣ ದಿನನಿತ್ಯ ಹೆಚ್ಚುತ್ತಿದೆ. ಆದರೆ ಶುಚಿತ್ವ ಸಮಾಜಕ್ಕೆ ಏಡ್ಸ್ ನಿಯಂತ್ರಣ ಅಗತ್ಯವಾಗಿದೆ. ಎಂದು ಹೇಳಿದರು.
ವಿದ್ಯಾರ್ಥಿಗಳು ಈಗಿನಿಂದಲೇ ವಿವಿಧ ಮಹಾಮಾರಿ ರೋಗದ ಬಗ್ಗೆ ತಿಳಿದುಕೊಂಡರೆ ಎಷ್ಟೋ ಬಡ ಜೀವಗಳನ್ನು ಬದುಕಿಸಬಹುದಾಗಿದೆ. ಮತ್ತು ತಮ್ಮ ಬದುಕನ್ನು ಸುಂದರ ಮಾಡಿಕೊಳ್ಳಬಹುದಾಗಿದೆ ಎಂದು ವಿದ್ಯಾರ್ಥಿಗಳಿಗೆ ಬಸವರಾಜ ದೇಶಮುಖ ಸಲಹೆ ನೀಡಿದರು.

ಶರಣಬಸವ ಕುಲಸಚಿವ ಅನೀಲಕುಮಾರ ಬಿಡವೆ ಮಾತನಾಡಿ, ಏಡ್ಸ್ ರೋಗ ಮಹಾಮಾರಿ ಡೆಂಜರೆಸ್ ರೋಗವಾಗಿದೆ. ಇದರಿಂದ ವಿದ್ಯಾರ್ಥಿಗಳು ಬದುಕಿನ ಬಗ್ಗೆ ನಿರ್ಲಕ್ಷ್ಯವಹಿಸದೇ ಎಚ್‌ಐವಿ ಸೋಂಕಿನ ಬಗ್ಗೆ ಅರಿತು ಕೊಳ್ಳುವುದು ಸೂಕ್ತವಾಗಿದೆ. ಎಂದರು.

ಶರಣಬಸವ ಮೌಲ್ಯಮಾಪನ ಕುಲಸಚಿವ ಲಿಂಗರಾಜ ಶಾಸ್ತ್ರಿ, ಡೀನ್ ಲಕ್ಷ್ಮಿ ಮಾಕಾ, ಡೀನ್ ಬಸವರಾಜ ಮಠಪತಿ, ಶಿವುಕುಮಾರ ಜವುಳಗಿ ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago