ಕಲಬುರಗಿ: ಸಮೃದ್ಧಿಯ ಸವಿನೆನಪಿನಲ್ಲಿ ಇಲ್ಲಿನ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಬಸವ ಮಂಟಪದಲ್ಲಿ ಬುಧವಾರ ನಡೆದ ವಚನಾಧರಿತ ವಿವಿಧ ಸ್ಪರ್ಧೆಗಳನ್ನು ಅದ್ಧೂರಿಯಾಗಿ ಜರುಗಿತು.
ಸುಮಾರು 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಎರಡು ನೂರಕ್ಕೂ ಹೆಚ್ಚು ವಚನಗಳನ್ನು ಬಾಯಿಪಾಠವಾಗಿ ವಾಚಿಸಿ ಪ್ರೇಕ್ಷಕರ ಮನಗೆದ್ದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಿ ಎಂ.ಜಿ.ಎಸ್.ವೈ. ಯೋಜನೆಯ ಕಾರ್ಯನಿರ್ವಾಹಕ ಅಭಿಯಂತರರಾದ ಡಾ.ಸುರೇಶ ಶರ್ಮಾ, ಬಸವಾದಿ ಶರಣರು ತಮ್ಮ ವಚನಗಳಿಂದ ಸಮಾಜ ಬದಲಾವಣೆಯ ಕ್ರಾಂತಿ ಮಾಡಿ, ಕಾಯಕವೇ ಕೈಲಾಸ ಎಂದು ಸಾರಿದ್ದಾರೆ. ಶರಣರು ತಮ್ಮ ವಚನಗಳಲ್ಲಿ ಪ್ರತಿಯೊಬ್ಬ ಮನುಷ್ಯ ಯಾವ ರೀತಿ ನಡೆದುಕೊಳ್ಳಬೇಕು ಎಂಬ ವಿಚಾರಗಳ ಬಗ್ಗೆ ಅತ್ಯಂತ ಸರಳವಾಗಿ ತಿಳಿಸಿದ್ದಾರೆ ಎಂದರು.
ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಶರಣರ ವಚನಗಳನ್ನು ರಕ್ಷಣೆ ಮಾಡುವ ಜತೆಗೆ ಮುಂದಿನ ಪೀಳಿಗೆಗೆ ಅವುಗಳ ಮಹತ್ವ ತಿಳಿಸಬೇಕು. ಶರಣ ಸಂಸ್ಕೃತಿ, ಸಂಪ್ರದಾಯಗಳನ್ನು ಅಳವಡಿಸಿಕೊಂಡು ನಮ್ಮ ಜೀವನ ಪಾವನ ಮಾಡಿಕೊಳ್ಳಬೇಕೆಂದರು.
ಹಿರಿಯ ಶರಣ ಚಿಂತಕ ಡಾ.ಮಲ್ಲಿಕಾರ್ಜುನ ವಡ್ಡನಕೇರಿ ಮಾತನಾಡಿ, ಬದುಕಿನ ಶಾಶ್ಚತ ಸತ್ಯದ ಹುಡುಕಾಟವೇ ಶರಣರ ಮುಖ್ಯ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ನೆರವಾದದ್ದೆ ‘ಅರಿವೇ ಗುರು’ ಎಂಬ ತತ್ವ. ಇದೇ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಉತ್ತಮ ಹೆಜ್ಜೆ ವಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಆರ್.ಜಿ.ಶಟಗಾರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಎಲ್.ಪಾಟೀಲ, ವಿಶ್ವನಾಥ ಮಂಗಲಗಿ, ಬಸವರಾಜ ಧೂಳಾಗುಂಡಿ, ದೀಪಿಕಾ ಬಿರಾದಾರ, ಶರಣರಾಜ್ ಛಪ್ಪರಬಂದಿ, ಶಿವಶರಣ ಕುಸನೂರ, ರವೀಂದ್ರಕುಮಾರ ಭಂಟನಳ್ಳಿ, ಎಸ್.ಎಂ. ಪಟ್ಟಣಕರ್, ಪರಮೇಶ್ವರ ಶಟಕಾರ, ಬಿ.ಎಂ.ಪಾಟೀಲ ಕಲ್ಲೂರ, ಶಿವಾನಂದ ಮಠಪತಿ, ಸತೀಶ ಸಜ್ಜನಶೆಟ್ಟಿ, ವಿಶಾಲಾಕ್ಷಿ ದೇಸಾಯಿ, ಪ್ರಸನ್ನ ವಾಂಜರಖೇಡೆ, ಡಾ.ನಾಗರಾಜ ಹೆಬ್ಬಾಳ, ಉದಯಕುಮಾರ ಸಾಲಿ, ಪ್ರಭುದೇವ ಯಳವಂತಗಿ, ಕಲ್ಯಾಣಪ್ಪ ಬಿರಾದಾರ, ಹಣಮಂತ ಖಜೂರಿ, ಅಶ್ವೀನಿ ಹಡಪದ, ನಾಗಲಿಂಗಯ್ಯಾ ಮಠಪತಿ ಸೇರಿದಂತೆ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…